ಸಚಿವ ಗೋವಿಂದಕಾರಜೋಳ ಪ್ರವಾಸ
ಕೊಪ್ಪಳ: ರಾಜ್ಯ ಸಣ್ಣ ನೀರಾವರಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಎಂ. ಕಾರಜೋಳ ಅವರು ಫೆ. 2ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಸಂಜೆ 5ಕ್ಕೆ ಗಂಟೆಗೆ ಗಂಗಾವತಿ ತಾಲೂಕು ಕನಕಗಿರಿಗೆ ಆಗಮಿಸುವರು. ಕನಕಗಿರಿಯಲ್ಲಿ ಏರ್ಪಡಿಸಲಾಗಿರುವ ಕನಕಗಿರಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಚಿವರು ಅದೇ ದಿನ ರಾತ್ರಿ 8.30ಕ್ಕೆ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳೆಸುವರು.
ನಾಳೆ ತ್ರಿವಿಕ್ರಮ ಜೋಷಿ ಪ್ರವಾಸ ಕಾರ್ಯಕ್ರಮ
ಕೊಪ್ಪಳ: ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ತ್ರಿವಿಕ್ರಮ ಜೋಷಿ ಫೆ. 1ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ತ್ರಿವಿಕ್ರಮ ಜೋಷಿಯವರು ಅಂದು ಮಧ್ಯಾಹ್ನ 3ಕ್ಕೆ ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದು, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸುವರು.
ಹುತಾತ್ಮ ದಿನಾಚರಣೆ
ಗಂಗಾವತಿ: ಹುತಾತ್ಮರ ದಿನಾಚರಣೆ ಅಂಗವಾಗಿ ನಗರದ ವಿಶ್ವಭಾರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಂದ ಶೃದ್ಧಾಂಜಲಿ ಕಾರ್ಯಕ್ರಮ ಜರುಗಿತು. ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ವಿದ್ಯಾರ್ಥಿಗಳು ನೃತ್ಯ ರೂಪಕದೊಂದಿಗೆ ಕೈಯಲ್ಲಿ ದೀಪಗಳನ್ನು ಹಿಡಿದು ಶೃದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶ್ರವಣಕುಮಾರ ರಾಯ್ಕರ್ ಮಾತನಾಡಿ, ಸೈನಿಕರು, ಹೋರಾಟಗಾರರು ಬಲಿದಾನದ ಸ್ಮರಣೆಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಸಂಸ್ಥೆಯ ಸದಸ್ಯರಾದ ನ್ಯಾಯವಾದಿ ಎನ್. ಪ್ರಹ್ಲಾದರಾವ್, ಮುಖ್ಯೋಪಾಧ್ಯಾಯ ವೆಂಕಟೇಶರಾವ್, ವಾದಿರಾಜ ಸಿಂಗನಾಳ ಇದ್ದರು.
ಬೆಟದಪ್ಪ ನೇಮಕ
ಗಂಗಾವತಿ: ಕಾಂಗ್ರೆಸ್ನ ಇತರೆ ಹಿಂದುಳಿದ ವರ್ಗಗಳ(ಓಬಿಸಿ)ಗಂಗಾವತಿ ಗ್ರಾಮೀಣ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಬೆಟದಪ್ಪ ಈಳಿಗೇರ ಅವರನ್ನು ನೇಮ ಮಾಡಲಾಗಿದೆ. ಕೆಪಿಸಿಸಿ ಇತರೆ ಹಿಂದುಳಿದ ವರ್ಗಗಳ ವಿಭಾಗದ ಆದೇಶದ ಮೇರೆಗೆ ಬೆಟದಪ್ಪ ಈಳಿಗೇರ ಅವರನ್ನು ಇತರೆ ಹಿಂದುಳಿದ ವರ್ಗಗಳ(ಓಬಿಸಿ)ಗ್ರಾಮೀಣ ಸಮಿತಿ ಅಧ್ಯಕ್ಷ ಈ. ಹನುಮಂತರಾಯ ನೇಮಕ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ಸುಮಾರು ವರ್ಷಗಳಿಂದ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದು, ಪಕ್ಷದ ಸಂಘಟನೆಗೆ ಶ್ರಮಿಸಬೇಕೆಂದು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

