ಧರಣಿ: ಮಾಜಿ ಸಂಸದ ಶಿವರಾಮಗೌಡ ಭೇಟಿ
ಗಂಗಾವತಿ: ನಗರದ ನಗರಸಭೆ ಹತ್ತಿರ ವಕೀಲ್ಗೇಟ್ ಕೊಳಚೆ ಪ್ರದೇಶ ನಿವಾಸಿಗಳ ಸಂಘದವರು ವಿನ್ಯಾಸದ ಪ್ರಕಾರ ಗುಡಿಸಲು ಸರಿಪಡಿಸುವುದು, ಅಭಿವೃದ್ಧಿ ಕಾಮಗಾರಿ ಪ್ರಾರಂಭಿಸುವುದು, ಹಳೆಯ ಭೂಮಾಲೀಕರಿಂದ ಕೊಳಚೆ ನಿವಾಸಿಗಳಿಗೆ ರಕ್ಷಣೆ ಕೋರಿ ಹಮ್ಮಿಕೊಂಡಿರುವ ಅನಿರ್ದಿಷ್ಟಕಾಲ ಧರಣಿ ಸ್ಥಳಕ್ಕೆ ಮಾಜಿ ಸಂಸದ ಶಿವರಾಮಗೌಡ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಮಗೌಡ, ಆ ಪ್ರದೇಶದ ನಿವಾಸಿಗಳ ಬಹುವರ್ಷಗಳ ಬೇಡಿಕೆಗಳನ್ನು ಈಡೇರಿಸಲು ತಕ್ಷಣ ಸ್ಪಂದಿಸುವಂತೆ ದೂರವಾಣಿಯಲ್ಲಿ ಜಿಲ್ಲಾಧಿಕಾರಿಗೆ ಹೇಳಲಾಗಿದೆ. ಇದೇ ವಿಷಯದ ಬಗ್ಗೆ ನಿನ್ನೆ ಕೊಳಚೆ ಅಭಿವೃದ್ಧಿ ಮಂಡಳಿಯ ಆಯುಕ್ತ ಗುರುಪ್ರಸಾದ ಹಾಗೂ ಕಾರ್ಯಪಾಲಕ ಅಭಿಯಂತ ಮೆಂಡಿಗೇರಿ ಜೊತೆಗೂ ಚರ್ಚಿಸಲಾಗಿದೆ. ಈಗಾಗಲೇ ನಿರ್ಣಯಿಸಿದಂತೆ ಭೂಮಾಲೀಕರು ಹಾಗೂ ಸ್ಥಳೀಯ ನಿವಾಸಿಗಳಿಗೆ ಅನ್ಯಾಯವಾಗದಂತೆ ಸಂಧಾನದೊಂದಿಗೆ ತಕ್ಷಣ ಕ್ರಮಕೈಗೊಳ್ಳಲು ತಿಳಿಸಲಾಗಿದೆ. ಸೂಕ್ತ ಕ್ರಮದ ಭರವಸೆ ನೀಡಿದ್ದಾರೆಂದು ಹೇಳಿದರು. ಕೆಲ ತಿಂಗಳುಗಳ ಹಿಂದೆ ನನ್ನ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಕ್ಷಣ ಕ್ರಮಕೈಗೊಳ್ಳಲು ತಿಳಿಸಲಾಗಿತ್ತು. ಆದರೆ, ಅಂದಿನ ಜಿಲ್ಲಾಧಿಕಾರಿಗಳು ಲೋಕಸಭೆ ಚುನಾವಣೆಯ ನಂತರ ಕ್ರಮಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೆ ಜಿಲ್ಲಾಡಳಿತ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿ ಕ್ರಮಕೈಗೊಳ್ಳದಿರುವುದರಿಂದ ಸ್ಥಳೀಯ ನಿವಾಸಿಗಳು ಅನಿವಾರ್ಯವಾಗಿ ಅನಿರ್ದಿಷ್ಟಕಾಲ ಧರಣಿ ಹಮ್ಮಿಕೊಂಡಿದ್ದಾರೆ. ತಕ್ಷಣ ಸ್ಪಂದಿಸಲು ನಗರಸಭೆ ಆಯುಕ್ತರಿಗೂ ಹೇಳಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

