ಕೊಪ್ಪಳ

ಭಾರತ ತ್ಯಾಗಿಗಳ ದೇಶ

Published On :

ಕೊಪ್ಪಳ: ಭಾರತ ತ್ಯಾಗಿಗಳ ದೇಶವಾಗಿದೆ ಎಂದು ಸಾಹಿತಿ ಡಾ. ಮಹಾಂತೇಶ ಮಲ್ಲನಗೌಡರ     ಹೇಳಿದರು.
ಅವರು ನಗರದ ಸಿಪಿಎಸ್ ಶಾಲೆಯಲ್ಲಿ ಭಾರತ ಸರ್ಕಾರ ನೆಹರು ಯುವ ಕೇಂದ್ರ, ಕೊಪ್ಪಳ ಯುವ ಸಾಂಸ್ಕೃತಿಕ ಸೇವಾ ಸಂಘ ಹಾಗೂ ವಂದೇಮಾತರಂ ಸೇವಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಡಾ. ಶ್ಯಾಮ ಪ್ರಸಾದ ಮುಖರ್ಜಿಯವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ದೇಶ ಸ್ವಾತಂತ್ರ್ಯ ಪಡೆಯಬೇಕಾದರೆ ಅನೇಕ ಮಹಾನ್ ನಾಯಕರು ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ದೇಶದ ಪ್ರತಿ ಪ್ರಜೆ ದೇಶದ ಅಭಿವೃದ್ಧಿಗಾಗಿ, ರಕ್ಷಣೆಗಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳವರು ಹಾಗೂ ದೇಶದ ರಕ್ಷಣೆಯಲ್ಲಿ ತಮ್ಮ ಜೀವನವನ್ನು ಲೆಕ್ಕಿಸದೆ ಜೀವನವನ್ನು ತ್ಯಾಗ ಮಾಡುವಂತ ವಿಶಾಲ ಗುಣವನ್ನು ಹೊಂದಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಮಾತನಾಡಿ, ದೇಶಕ್ಕಾಗಿ ಡಾ. ಶ್ಯಾಮ ಪ್ರಸಾದ ಮುಖರ್ಜಿಯವರು ನೀಡಿದ ಕೊಡುಗೆ ಅಪಾರವಾಗಿದೆ. ಅಂತಹ ಮಾಹನ್ ನಾಯಕರ ತತ್ವ ಹಾಗೂ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ತಮ್ಮದೆಯಾದ ಕೊಡುಗೆ ನೀಡಬೇಕು ಎಂದರು. ಯುವ ಸಾಂಸ್ಕೃತಿಕ ಸೇವಾ ಸಂಘದ ಸದಸ್ಯ ಸುರೇಶ ಕುಂಬಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವ ಸಾಂಸ್ಕೃತಿಕ ಸೇವಾ ಸಂಘದ ಅಧ್ಯಕ್ಷ ಆನಂದ ಹಳ್ಳಿಗುಡಿ, ವಂದೇಮಾತರಂ ಸೇವಾ ಸಂಘದ ಅಧ್ಯಕ್ಷ ರಾಕೇಶ ಕಾಂಬ್ಳೇಕರ, ಸಿ.ಪಿ.ಎಸ್. ಶಾಲೆ ಶಿಕ್ಷಕರಾದ ವಿರೂಪಾಕ್ಷಪ್ಪ ಬಾಗೋಡಿ, ಶಂಕ್ರಮ್ಮ ಬಂಗಾರಶೆಟ್ಟರ್, ಸಾವಿತ್ರಿ ದಾಸ್, ಮೋಹಿನ್ ಪಾಷಾಬಿ, ಗಂಗಮ್ಮ ತೋಟದ, ಗೌಸೀಯಾ ಬೇಗಂ, ಅಂಬಕ್ಕ, ವಿಜಯಾ, ವಿಜಯಲಕ್ಷ್ಮಿ, ಭಾರತಿ, ರತ್ನಾ ಮುಂತಾದವರು ಇದ್ದರು. ಶಿಕ್ಷಕ ಗುರುರಾಜ ಕಟ್ಟಿ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.