ಕೊಪ್ಪಳ

ಆಯ್ಕೆ ಪಟ್ಟಿ ವಿಳಂಬ: ಧರಣಿ

Published On :

ಗಂಗಾವತಿ: ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ಈಗಾಗಲೇ ಅರ್ಜಿ ಕರೆದು ಒಂದು ತಿಂಗಳಾದರೂ ಹಾಸ್ಟೆಲ್ ಆಯ್ಕೆ ಪಟ್ಟಿ ಪ್ರಕಟಣೆ ಮಾಡಲು ಬಿಸಿಎಂ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆಂದು ಖಂಡಿಸಿ ಎಸ್‌ಎಫ್‌ಐ ತಾಲೂಕು ಸಮಿತಿ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ತಾಪಂ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸಿದರು.
ಗಂಗಾವತಿ ತಾಲೂಕಿನಲ್ಲಿ 2 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ  ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ್ದು, ಆಯ್ಕೆ ಪಟ್ಟಿ ಪ್ರಕಟಣೆ ಮಾಡುತ್ತಾರೆಂದು ಪಾಲಕರು ಕಾಯುತ್ತಿದ್ದರೂ, ಪ್ರಕಟಣೆ ಮಾಡದೇ ಆಯ್ಕೆ ಪಟ್ಟಿ ಸಮಿತಿ ಅಧ್ಯಕ್ಷರು, ಶಾಸಕರು, ಸಚಿವರು ಅಧಿವೇಶನದಲ್ಲಿದ್ದಾರೆಂದು ಹೇಳುತ್ತಿದ್ದಾರೆ.
ಶಾಲೆ ಪ್ರಾರಂಭವಾಗಿ 2 ತಿಂಗಳು ಕಳೆದರೂ, ಹಾಸ್ಟೆಲ್‌ಗೆ ಅರ್ಜಿ ಹಾಕಿದ ವಿದ್ಯಾರ್ಥಿಗಳು ಶಾಲೆಗೆ ದಿನನಿತ್ಯ ಹಣ ಕೊಟ್ಟು ಬರಲು ಆಗುತ್ತಿಲ್ಲ ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದ ಪಟ್ಟಿ ಪ್ರಕಟಣೆ ಬಿಸಿಎಂ ಇಲಾಖೆ ಮಾತ್ರ ಮಾಡಿದೆ. ಆದರೆ ಗಂಗಾವತಿ, ಕನಕಗಿರಿ ವ್ಯಾಪ್ತಿಯಲ್ಲಿ ಬರುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆ ಮಾಡಲು ಮೀನಾಮೇಷ ಮಾಡುತ್ತಿದ್ದಾರೆ. ಹಲವಾರು ಬಾರಿ ಎಸ್‌ಎಫ್‌ಐ ಸಂಘಟನೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಕೂಡಲೇ ಶಾಸಕರು, ಸಚಿವರ ಗಮನಕ್ಕೆ ತಂದು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಿತಾಸಕ್ತಿ ಕಾಪಾಡಲು ಈ ಕೂಡಲೇ ಹಾಸ್ಟೆಲ್ ಆಯ್ಕೆ ಪಟ್ಟಿ ಪ್ರಜಾಸತ್ತಾತ್ಮಕವಾಗಿ ಪ್ರಕಟಣೆ ಮಾಡಬೇಕೆಂದು ಧರಣಿ ನಿರತರು ಒತ್ತಾಯಿಸಿದರು.
ಸಮಿತಿ ಅಧ್ಯಕ್ಷ ಮಂಜುನಾಥ, ಕಾರ್ಯದರ್ಶಿ ಗ್ಯಾನೇಶ ಕಡಗದ ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.