ಇಸ್ಪೀಟ್: 6 ಜನರ ಬಂಧನ
ಕನಕಗಿರಿ: ಸಮೀಪದ ನವಲಿ ಗ್ರಾಮದ ಪಶು ಚಿಕಿತ್ಸಾ ಕೇಂದ್ರದ ಮುಂಭಾದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರು ಜನರ ಮೇಲೆ ಪಿಎಸೈ ವೀರಣ್ಣ ಮಾಗಿ ದಿಢೀರ್ ದಾಳಿ ನಡೆಸಿ ಬಂಧಿಸಿದ್ದಾರೆ.
ಶುಕ್ರವಾರ ಸಂಜೆ ದುರುಗಪ್ಪ ನಾರಿನಾಳ, ಗುಡದಪ್ಪ ಹರಿಜನ, ಅಯ್ಯಪ್ಪ ಹರಿಜನ, ಶಾಮೀದ್ಸಾಬ್ ಜವಳಗೇರಾ, ತಿಮ್ಮಣ್ಣ ಕಲ್ಲೂರು ಹಾಗೂ ರಾಮಣ್ಣ ಇಸ್ಪೀಟ್ ಆಟದಲ್ಲಿ ತೊಡಗಿದ್ದಾಗ ದಾಳಿ ನಡೆಸಿ ಇವರನ್ನು ಬಂಧಿಸಲಾಗಿದೆ. ಬಂಧಿತರಿಂದ ರು. 1230 ನಗದು ವಶಪಡಿಸಿಕೊಳ್ಳಲಾಗಿದೆ. ಸ್ಥಳೀಯ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ದಾಳಿ ತಂಡದಲ್ಲಿ ಪೇದೆಗಳಾದ ಪರಶುರಾಮ, ನಾಗರಾಜ, ಪ್ರದೀಪ ದೇಸಾಯಿ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

