ಲೆಕ್ಕಪರಿಶೋಧನೆ ಮಾಡಿಸಲು ಸೂಚನೆ
ಕೊಪ್ಪಳ: ಜಿಲ್ಲೆಯ ಎಲ್ಲ ಕಾರ್ಯನಿರತ ಸಹಕಾರ ಸಂಘ ಹಾಗೂ ಸೌಹಾರ್ದ ಸಹಕಾರ ಸಂಘ ಕಾಯ್ದೆ ಪ್ರಕಾರ ಸೆ. 1ರೊಳಗೆ 2013- 14ನೇ ಸಾಲಿನ ಲೆಕ್ಕಪರಿಶೋಧನೆ ಮಾಡಿಸುವಂತೆ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕರು ತಿಳಿಸಿದ್ದಾರೆ. ಲೆಕ್ಕಪರಿಶೋಧನಾ ವರದಿಯನ್ನು ಸರ್ವಸಾಧಾರಣ ಸಭೆಗೆ ಮಂಡಿಸಬೇಕಿದೆ. ಆದರೆ ಜಿಲ್ಲೆಯ ಬಹುತೇಕ ಸಹಕಾರ ಸಂಘಗಳು ಈವರೆಗೂ ಲೆಕ್ಕಪರಿಶೋಧಕರನ್ನಾಗಲಿ ಅಥವಾ ಇಲಾಖಾ ಲೆಕ್ಕಪರಿಶೋಧಕರನ್ನಾಗಲಿ ಮಾಡಿಸಿಲ್ಲ. ಇದರಿಂದ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಮುಖ್ಯಕಾರ್ಯನಿರ್ವಾಹಕರು ಹಾಗೂ ಆಡಳಿತ ಮಂಡಳಿ ನಿರ್ದೇಶಕರಿಗೆ ಕಾಯ್ದೆಯಲ್ಲಿ ಶಿಕ್ಷೆ ವಿಧಿಸಲು ಅವಕಾಶವಿದೆ. ಹಾಗಾಗಿ ಸಂಬಂಧಪಟ್ಟವರು ಕೂಡಲೇ 2013- 14ನೇ ಸಾಲಿನ ಲೆಕ್ಕಪರಿಶೋಧನೆ ಮಾಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

