ಸವಳಕ್ಯಾಂಪ್ಗೆ ಸೌಲಭ್ಯ ಒದಗಿಸಿ
ಗಂಗಾವತಿ: ಹೊಸಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸವಳಕ್ಯಾಂಪ್ನಲ್ಲಿ ಸುಮಾರು 30 ವರ್ಷಗಳಿಂದ ಯಾನಾದಿ ದಲಿತ ಕುಟುಂಬಗಳು ವಾಸಿಸುತ್ತಿರುವ ಓಣಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಅಲ್ಲಿನ ಭೂ-ಮಾಲೀಕ ವರ್ಗ ಕಿರುಕುಳ ನೀಡುತ್ತಿದ್ದು, ಮೂಲಭೂತ ಸೌಕರ್ಯಗಳೂ ಇಲ್ಲ. ಕೂಡಲೇ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಈ ಬಗ್ಗೆ ಗಮನ ನೀಡಬೇಕು ಎಂದು ಭಾರತ ಕಮ್ಯೂನಿಷ್ಟ ಪಕ್ಷ (ಮಾರ್ಕ್ಸ್ವಾದಿ-ಲೆನಿನ್ವಾದಿ) ಲಿಬರೇಷನ್ ಪ್ರಧಾನ ಕಾರ್ಯದರ್ಶಿ ಬಸವರಾಜ ಒತ್ತಾಯ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಾನವಹಕ್ಕುಗಳ ಆಯೋಗಕ್ಕೆ ಪಿಯುಸಿಎಲ್ ದೂರು ನೀಡಿದ್ದರ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷೀಯ ಮಂಡಳಿ ಸದಸ್ಯ ನ್ಯಾಯಮೂರ್ತಿ ಸಿ.ಜೆ. ಹುನಗುಂದ ಸ್ಥಳ ಪರಿಶೀಲನೆ ಮಾಡಿ ಕ್ಯಾಂಪಿನ ನಿವಾಸಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಕೊಪ್ಪಳ ಜಿಲ್ಲಾಧಿಕಾರಿಗೆ ಸೂಚಿಸಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಅಲ್ಲದೇ ದಲಿತರಿಗೆ ಭೂ-ಮಾಲೀಕರಿಂದ ಇನ್ನೂ ಕಿರುಕುಳ ಹೆಚ್ಚಾಗುತ್ತಿದೆ.
ಸವಳಕ್ಯಾಂಪ್ ಗ್ರಾಮ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಬರುವುದರಿಂದ ಇಲ್ಲಿನ ಶಾಸಕರೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೂ ದಲಿತರಿಗೆ ಬೆಂಬಲಿಸದೇ ಸವರ್ಣೀಯರಿಗೆ ಬೆಂಬಲಿಸುತ್ತಿದ್ದಾರೆ.
ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಸವಳಕ್ಯಾಂಪ್ಗೆ ಭೇಟಿ ನೀಡಿ ಅಲ್ಲಿನ ದಲಿತರ ಸ್ಥಿತಿಗತಿ ಮನಗಂಡು ನ್ಯಾಯ ಒದಗಿಸಬೇಕು. ಇಲ್ಲದಿದ್ದಲ್ಲಿ ಸಿಪಿಐಎಂಎಲ್, ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಪಿಯುಸಿಎಲ್ ಸಂಘಟನೆಗಳೊಂದಿಗೆ ಜಿಲ್ಲಾದ್ಯಂತ ಸಚಿವರ ಹಾಗೂ ಸರ್ಕಾರದ ವಿರುದ್ಧ ಉಗ್ರ ಚಳವಳಿ ನಡೆಸಿಲಿವೆ ಎಂದು ಬಸವರಾಜ ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

