ಕೊಪ್ಪಳ

ಜನಸಂಪರ್ಕ ಸಂವಾದ ಕಾರ್ಯಕ್ರಮ ಯಶಸ್ವಿ

Published On :

ಕೊಪ್ಪಳ: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಾಗಿ ಜನಸಂಪರ್ಕ ಸಂವಾದ ಕಾರ್ಯಕ್ರಮ ಯಲಬುರ್ಗಾ ತಾಲೂಕಿನ ಕುಕನೂರು ಗ್ರಾಮದ ಶ್ರೀಗವಿಸಿದ್ದೇಶ್ವರ ಪ್ರೌಢ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿತ್ತು.
ಮಕ್ಕಳ ವಿಶೇಷ ಪೊಲೀಸ್ ಘಟಕದ ಬಸಪ್ಪ ಹಾದಿಮನೆ ಮಾತನಾಡಿ, ದೇಶದ ಎಲ್ಲ ಮಕ್ಕಳಿಗೂ ಅವರ ಹಕ್ಕುಗಳನ್ನು ಅವರಿಗೆ ಒದಗಿಸಲು ಕಟಿಬದ್ಧವಾಗಿದೆ. ಎಂದರು. ಬಾಲ ನ್ಯಾಯ (ಆರೈಕೆ ಮತ್ತು ಪೋಷಣೆ) ಕಾಯ್ದೆ-2000 ರನ್ವಯ ಜಿಲ್ಲೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರೋಬೇಷನ್ ಅಧಿಕಾರಿ ಶಿವಲೀಲಾ ವನ್ನೂರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರವಿಕುಮಾರ ಪವಾರ ಮಾತನಾಡಿದರು. ಶ್ರೀಗವಿಸಿದ್ದೇಶ್ವರ ಅಂಗನವಾಡಿ ತರಬೇತಿ ಕೇಂದ್ರದ ಎಂ.ಎಸ್. ಪೊಲೀಸ್ಪಾಟೀಲ, ಕುಕನೂರು ಪೊಲೀಸ್ ಠಾಣೆಯ ಶಿವಶಂಕ್ರಪ್ಪ ಕುರಿ, ಅಂಗನವಾಡಿ ಮೇಲ್ವಿಚಾರಕಿ ರುಕ್ಮೀಣಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.