ಕೊಪ್ಪಳ

ಕಾರಟಗಿ ರಾಘವೇಂದ್ರಸೇವಾ ಸಮಿತಿ ಸಭೆ

Published On :

ಕಾರಟಗಿ: ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿ ಮಠ ಸೇವಾ ಸಮಿತಿಯ ಸಭೆ ಮಠದ ಆವರಣದಲ್ಲಿ ನಡೆಯಿತು. ಸಮಿತಿ ಅಧ್ಯಕ್ಷ ಕೃಷ್ಣಾಚಾರ್ ಇನಾಮದಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಮಠದ ನಿರ್ಮಾಣದ ಕುರಿತು ಚಚಿಸಲಾಯಿತು. ಅಗಸ್ಟ್ 11,12,13ರಂದು ನಡೆಯುವ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವನ್ನು ಮಠ ನಿರ್ಮಾಣದ ಸ್ಥಳದಲ್ಲೆ ಆಚರಿಸಲು ನಿರ್ಧರಿಸಲಾಯಿತು. ಮೂರು ದಿನಗಳ ಆರಾಧನಾ ಮಹೋತ್ಸವ ಹಾಗೂ ಅಗಸ್ಟ್ 14ರಂದು ಸತ್ಯನಾರಾಯಣ ಪೂಜೆ ಹಮ್ಮಿಕೊಂಡಿದ್ದು, ಕಾರಟಗಿ ಸೇರಿದಂತೆ ಸುತ್ತಲಿನ ಗ್ರಾಮಗಳ ಭಕ್ತರು ಪಾಲ್ಗೊಳ್ಳುವಂತೆ ಮಾಡಲು ಸಕಲ ಸಿದ್ಧತೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.