ಆದಿಶ್ರೀಗೆ ಶ್ರದ್ಧಾಂಜಲಿ
ಮಂಡ್ಯ: ತಾಲೂಕಿನ ಹುಲಿವಾನ ಗ್ರಾಮದ ಪಂಚಾಯಿತಿ ಆವರಣದಲ್ಲಿ ಗ್ರಾಮಸ್ಥರ ವತಿಯಿಂದ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಶ್ರದ್ಧಾಂಜಲಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ವಿಶ್ವಮಾನವ ಕ್ಷೇತ್ರದ ಪುರುಷೋತತಮಾನಂದನಾಥ ಸ್ವಾಮೀಜಿ, ಚುಂಚಶ್ರೀಗಳು ಕೇವಲ ಮಠಕ್ಕೆ ಸೀಮಿತವಾಗಿರದೆ ಸಮಾಜದ ಅಭ್ಯುದಯಕ್ಕೆ ದುಡಿದ ಮಹಾನ್ ಚೇತನ. ಸಮಾಜದ ಎಲ್ಲಾ ವರ್ಗಗಳನ್ನು ಮೇಲೆತ್ತಲು ಶ್ರೀಗಳು ಅಪಾರವಾಗಿ ಶ್ರಮಿಸಿದರು. ಜಿಲ್ಲೆ, ರಾಜ್ಯ, ಹೊರ ರಾಜ್ಯ ಸೇರಿದಂತೆ ವಿದೇಶಗಳಲ್ಲೂ ಶ್ರೀಗಳು ಸಮಾಜದ ಉದ್ಧಾರಕ್ಕಾಗಿ ಶ್ರಮಿಸಿದ್ದಾರೆ ಎಂದು ಬಣ್ಣಿಸಿದರು. ಇದೇ ಸಂದರ್ಭದಲ್ಲಿ ಸಾವಿರಾರು ಮಂದಿಗೆ ಅನ್ನಸಂತರ್ಪಣೆ ಮಾಡಲಾಯಿತು. ಗ್ರಾಮದ ಮುಖಂಡರು ಹಾಗೂ ಜನತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚುಂಚಶ್ರೀಗಳಿಗೆ ನಮನ ಸಲ್ಲಿಸಿದರು.
ತ್ಯಾಗರಾಜರ ಆರಾಧನಾ ಮಹೋತ್ಸವ
ಶ್ರೀರಂಗಪಟ್ಟಣ: ಪಟ್ಟಣದ ಕೋದಂಡರಾಮ ದೇವಾಲಯದ ಸಮಿತಿ ವತಿಯಿಂದ ತ್ಯಾಗರಾಜರ ದೇವಸ್ಥಾನ ಆವರಣದಲ್ಲಿ ವತಿಯಿಂದ ತ್ಯಾಗರಾಜರ 166ನೇ ಆರಾಧನಾ ಮಹೋತ್ಸವ ಸಂಭ್ರಮದಿಂದ ನಡೆಯಿತು. ಇಲ್ಲಿನ ತ್ಯಾಗರಾಜರ ದೇವಸ್ಥಾನದ ಆವರಣದಲ್ಲಿ ಎರಡು ದಿನಗಳ ಕಾಲ ಜರುಗಿದ ಕಾರ್ಯಕ್ರಮದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ ಪ್ರಸಿದ್ಧ ಗಾಯಕರಿಂದ ಪಂಚರತ್ನ ಕೃತಿಗಳ ಗೋಷ್ಠಿ ನಡೆದವು. ಇದಕ್ಕೂ ಮೊದಲು ಪಟ್ಟಣದ ಪ್ರಮುಖ ಬೀದಿಗಳಲ್ಲಿ ತ್ಯಾಗರಾಜರ ಭಾವಚಿತ್ರವನ್ನು ಮೆರವಣಿಗೆ ನಡೆಯಿತು. ನಂತರ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸೇವಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಭಕ್ತರು ಸೇರಿದಂತೆ ಸಮಿತಿ ಸದಸ್ಯರು ಇದ್ದರು.
ಪ್ರತಿಭಾ ಕಾರಂಜಿ:ಪ್ರಥಮ ಸ್ಥಾನ
ಮಂಡ್ಯ: ನಗರದ ಗೀತಾಂಜಲಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಸಾಯಿ ಸ್ಮಿತಾ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿವಿಧ ಪ್ರಕಾರಗಳಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾಳೆ. ಜಿಲ್ಲಾ ಮಟ್ಟದ ಧಾರ್ಮಿಕ ಪಠಣ, ಅಭಿನಯ ಗೀತೆಯಲ್ಲಿ ಪ್ರಥಮ ಸ್ಥಾನ ಮತ್ತು ಲಘು ಸಂಗೀತದಲ್ಲಿ ತೃತೀಯ ಸ್ಥಾನ ಗಳಿಸಿ ಸಂಸ್ಥೆಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾಳೆ ಎಂದು ಶಾಲೆಯ ಮುಖ್ಯಸ್ಥರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

