ಮಂಡ್ಯ

ಗ್ರಾಮ ವಾಸ್ತವ್ಯ

Published On :

ಮದ್ದೂರು: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ದಲಿತರು ಪಡೆದಿರುವ ಎಲ್ಲ ಸಾಲ ಮನ್ನಾ ಮಾಡಲು ಪಕ್ಷ ಚಿಂತನೆ ನಡೆಸಿದೆ ಎಂದು ಸಂಸದ ಚಲುವರಾಯಸ್ವಾಮಿ ತಿಳಿಸಿದರು.
ತಾಲೂಕಿನ ಕೊಪ್ಪ ಹೋಬಳಿಯ ತರೀಕೆರೆ ಕಾಲೋನಿಯಲ್ಲಿ ಗ್ರಾಮ ವಾಸ್ತವ್ಯಕ್ಕೂ ಮುನ್ನ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ರೈತರು, ದಲಿತರು ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗಗಳ ಅಭಿವೃದ್ಧಿಗಾಗಿ ವಿನೂತನ ಕಾರ್ಯಕ್ರಮಗಳನ್ನು ರೂಪಿಸಲಿದೆ ಎಂದರು.
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅದೇ ರೀತಿ ಎಚ್.ಡಿ. ದೇವೇಗೌಡರು ಪ್ರಧಾನಿಯಾಗಿದ್ದಾಗ ರಾಜಕೀಯದಲ್ಲಿ ದಲಿತರು, ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸುವ ಮೂಲಕ ರಾಜಕೀಯದಲ್ಲಿ ಅವಕಾಶ ಕಲ್ಪಿಸಿದವರು ಎಂದು ಹೇಳಿದರು.
ಸಮಾಜದ ಎಲ್ಲ ಜಾತಿಗಳಲ್ಲಿಯೂ ಬಡವರಿದ್ದಾರೆ. ಬಡವರ ಅನುಕೂಲಕ್ಕಾಗಿ ಸರ್ಕಾರಗಳು ಹಲವಾರು ಯೋಜನೆಯನ್ನು ಜಾರಿಗೆ ತಂದಿವೆ. ಆದರೆ, ಅಸ್ಪೃಶ್ಯತೆ ಎಂಬುವುದು ಮಾತ್ರ ನಿಂತಿಲ್ಲ ಎಂದು ತಿಳಿಸಿದರು.
ಗ್ರಾಮ ವಾಸ್ತವ್ಯದಿಂದ ಸಂಪೂರ್ಣ ಚಿತ್ರಣವೇ ಬದಲಾಗುವುದಿಲ್ಲ, ಬದಲಿಗೆ ಅಸ್ಪೃಶ್ಯತೆಯಿಂದ ನೋವು ಅನುಭವಿಸಿರುವ ಜೀವಗಳಿಗೆ ಆತ್ಮಸ್ಥೈರ್ಯವನ್ನು ಈ ಕಾರ್ಯದಿಂದ ತುಂಬಬಹುದು. ಅಲ್ಲದೆ ಮುಂದಿನ ದಿನಗಳಲ್ಲಿ ಈ ಕಾರ್ಯ ಇತರರಿಗೆ ಮಾದರಿಯಾಗುತ್ತದೆ ಎಂದರು.
ಮಾಜಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯವನ್ನು ರಾಷ್ಟ್ರಕ್ಕೆ ಪರಿಚಯಿಸಿದರು. ಮೇಲ್ವರ್ಗ ಮತ್ತು ದಲಿತರ ನಡುವಿನ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿ ಅನೇಕ ಕಾರ್ಯಕ್ರಮಗಳನ್ನು ನೀಡಿದರು. ಅವರ ಹಾದಿಯಲ್ಲಿ ನಾವುಗಳು ಸಾಗುತ್ತಿದ್ದೇವೆ ಎಂದರು. ಜೆಡಿಎಸ್ ಎಸ್ಸಿ-ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಡಾ.ಕೆ. ಅನ್ನದಾನಿ, ಜಿಲ್ಲಾಧ್ಯಕ್ಷ ಸೋಮಶೇಖರ್ ಕೆರಗೋಡು, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್, ತರೀಕೆರೆ ರಮಾನಂದ, ಜಯರಾಂ, ರವಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.