ಇಂದು ಮಹದೇವಪುರದಲ್ಲಿ ಆರೋಗ್ಯ ಉಚಿತ ತಪಾಸಣೆ
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಫೆ. 5ರಂದು ಉಚಿತ ಆಯುರ್ವೇದ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.
ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಶಿಬಿರದಲ್ಲಿ ಕೆಮ್ಮು, ದಮ್ಮು, ಉಸಿರಾಟ ತೊಂದರೆ ಮುಂತಾದ ಶ್ವಾಸಕ್ಕೆ ಸಂಬಂಧಪಟ್ಟ ಕಾಯಿಲೆ ಮತ್ತು ಸ್ತ್ರೀ ರೋಗ, ವಾತರೋಗ, ಮಂಡಿ ನೋವು, ಕೀಲು ನೋವು ಹಾಗೂ ಇನ್ನಿತರ ಕಾಯಿಲೆಗಳಿಗೆ ತಪಾಸಣೆ ನಡೆಸಿ, ಉಚಿತ ಚಿಕಿತ್ಸೆ ನೀಡಲಾಗುವುದು.
ಶಿಬಿರದಲ್ಲಿ ಆಯುಷ್ ಇಲಾಖೆಯ ತಜ್ಞ, ವೈದ್ಯರು ಭಾಗವಹಿಸಿ ರೋಗಿಗಳಿಗೆ ಉಚಿತ ಔಷಧಿ ನೀಡುವರು. ಮಹದೇವಪುರ ಹಾಗೂ ಅಕ್ಕಪಕ್ಕದ ಗ್ರಾಮದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕೆ.ಕಾಳೇಗೌಡ ಹಾಗೂ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಯಾದ ಡಾ. ಸೀತಾಲಕ್ಷ್ಮಿ ಜಂಟಿ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

