ಮಂಡ್ಯ

ನಾಳೆ ಆದಿಶ್ರೀ ಗೆ ಶ್ರದ್ಧಾಂಜಲಿ

Published On :

ಮಂಡ್ಯ: ನಗರದ ಗಾಂಧಿಭವನದಲ್ಲಿ ಸ್ವಾಭಿಮಾನಿ ಒಕ್ಕಲಿಗರ ಸೇವಾ ಟ್ರಸ್ಟ್ ವತಿಯಿಂದ ಜ.25 ರಂದು ಜಗದ್ಗುರು ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಪಿಇಎಸ್ ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಎಚ್.ಡಿ.ಚೌಡಯ್ಯ ನುಡಿ ನಮನ ಸಲ್ಲಿಸಲಿದ್ದಾರೆ.
7ನೇ ಪ್ರಾಂಶುಪಾಲರ ಸಭೆ ಇಂದು
ಮಂಡ್ಯ: ಸರ್ಕಾರಿ ಪಪೂ ಕಾಲೇಜಿ (ಮಾಜಿ ಪುರಸಭೆ)ನಲ್ಲಿ ಜ.24ರಂದು 2012-13ನೇ ಸಾಲಿನ ಪ್ರಥಮ, ದ್ವಿತೀಯ ಪಿಯುಸಿ ವಾರ್ಷಿಕ (ಪ್ರಾಯೋಗಿಕ-ತಾತ್ವಿಕ) ಪರೀಕ್ಷೆ ಸಂಬಂಧ 7ನೇ ಪ್ರಾಂಶುಪಾಲರ ಸಭೆ ಏರ್ಪಡಿಸಲಾಗಿದೆ. ಜಿಲ್ಲೆ ವ್ಯಾಪ್ತಿಗೆ ಒಳಪಡುವ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್. ಕೃಷ್ಣಯ್ಯ ತಿಳಿಸಿದ್ದಾರೆ.
ಫೆ.15ರಂದು ವಧು-ವರರ ಮುಖಾಮುಖಿ
ಮಂಡ್ಯ: ಕರ್ನಾಟಕ ಅಂಬುದ್ಧ ಸಾಂಸ್ಕೃತಿಕ ವೇದಿಕೆ ರಾಜ್ಯ ಸಮಿತಿ ಮಂಡ್ಯ ಫೆ.15 ರಂದು ಅಂಬುದ್ಧ ವಧು - ವರರ ಅನ್ವೇಷಣಾ ವೇದಿಕೆ ವತಿಯಿಂದ ಪರಿಶಿಷ್ಟ ಜಾತಿ ವರ್ಗಗಳ ಎಲ್ಲಾ ಉಪಜಾತಿಗಳನ್ನು ಒಳಗೊಂಡ ವಧು -ವರರ ಮುಖಾಮುಖಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಂಘದ ಪ್ರಧಾನ ಸಂಚಾಲಕ ನಾಗರಾಜು ತಿಳಿಸಿದ್ದಾರೆ.
ಅಂಬಿಗರ ಚೌಡಯ್ಯ ಜಯಂತಿ
ಕೆ.ಆರ್.ಪೇಟೆ: ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಅಂಬಿಗರ ಚೌಡಯ್ಯ ಅವರ ಜಯಂತಿ ಮಹೋತ್ಸವ ನಡೆಯಿತು. ಸಮಾರಂಭದಲ್ಲಿ ಮಾತನಾಡಿದ ತಹಸೀಲ್ದಾರ್ ಡಾ.ಎಚ್.ಎಲ್.ನಾಗರಾಜು, ಸಮಾಜದ ಉದ್ಧಾರಕ್ಕಾಗಿ ದುಡಿದ ಮಹನೀಯರನ್ನು ಜಾತಿಯ ಆಧಾರದ ಮೇಲೆ ನೋಡುವುದು ಸರಿಯಲ್ಲ ಎಂದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಡಾ. ನರಸಿಂಹರಾಜು, ಅಂಬಿಗರ ಚೌಡಯ್ಯ ಅವರನ್ನು ಕುರಿತು ವಿಶೇಷ ಉಪನ್ಯಾಸ ನೀಡಿದರು. ಗ್ರೇಡ್ 2 ತಹಸೀಲ್ದಾರ್ ಎಂ.ಸತ್ಯಭಾಮ, ನಿವೃತ್ತ ಎಂಜಿನಿಯರ್ ಗಣೇಶಗೌಡ, ರೈತ ಮುಖಂಡರಾದ ರಾಜೇಗೌಡ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.