ಮಂಡ್ಯ

ಆದಿಶ್ರೀ ಪುಣ್ಯಾರಾಧನೆ: ಸಿದ್ಧತೆ ಪರಿಶೀಲನೆ

Published On :

ಮಂಡ್ಯ: ಆದಿಚುಂಚನಗಿರಿ ಪೀಠಾಧಿಪತಿಯಾಗಿದ್ದ ಬಾಲಗಂಗಾಧರನಾಥ ಸ್ವಾಮೀಜಿಗಳ ಪುಣ್ಯಾರಾಧನೆ ಸಿದ್ಧತೆ ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬುಧವಾರ ಚುಂಚನಗಿರಿಗೆ ಭೇಟಿ ನೀಡಿ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಚುಂಚನಗಿರಿಗೆ ಸಂಜೆ ಆಗಮಿಸಿದ ಕುಮಾರಸ್ವಾಮಿ, ಸಂಸದ ಚಲುವರಾಯಸ್ವಾಮಿ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ಸಿದ್ಧತೆ ಪರಿಶೀಲಿಸಿದರು.  ನಂತರ ಮೂವರು ಅರ್ಧ ತಾಸಿಗೂ ಅಧಿಕ ಕಾಲ ಪ್ರತ್ಯೇಕವಾಗಿ ಸಮಾಲೋಚನೆಯಲ್ಲಿ ತೊಡಗಿದರು. ಜ. 28ರಂದು ನಡೆಯಲಿರುವ ಸಂತರ ಸಂಗಮದಲ್ಲಿ ದೇಶ- ವಿದೇಶಗಳ ಸಾಧು ಸಂತರು ಹಾಗೂ ಜ. 29ರಂದು ಭಕ್ತರ ಸಂಗಮದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವರು. ಶ್ರೀಗಳ ಗದ್ದುಗೆ ವೀಕ್ಷಿಸಲು ಭಕ್ತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ತಿಳಿಸಿದರು. ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮಕ್ಕೆ ರಾಜಕೀಯ ಥಳುಕು ಹಾಕುವುದು ಬೇಡ.ಇದೊಂದು ಪಕ್ಷಾತೀತ ಕಾರ್ಯಕ್ರಮ. ಎಲ್ಲಾ ಪಕ್ಷಗಳ ಹಿರಿಯ ನಾಯಕರು ಪುಣ್ಯಾರಾಧನೆಯಲ್ಲಿ ಪಾಲ್ಗೊಂಡು ಶ್ರೀಗಳಿಗೆ ನಮನ ಸಲ್ಲಿಸಲಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.