ಮಂಡ್ಯ

ಬನವಾಸಿ ತಾಲೂಕು ಮಾಡಲು ಆಗ್ರಹ

Published On :

ಮಂಡ್ಯ: ಕನ್ನಡಿಗರ ಪ್ರಥಮ ರಾಜಧಾನಿ ಬನವಾಸಿಯನ್ನು ತಾಲೂಕು ಕೇಂದ್ರವನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ಕದಂಬ ಸೈನ್ಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಕೆಲಕಾಲ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
 ಪ್ರಾಚೀನ ಹಿನ್ನೆಲೆಯಿರುವ ಐತಿಹಾಸಿಕ, ಸಾಮಾಜಿಕ, ಸಾಂಸ್ಕೃತಿಕ, ಆಡಳಿತಾತ್ಮಕ, ಆರ್ಥಿಕವಾಗಿ ಕೇಂದ್ರ ಬಿಂದುವಗಿರುವ ಮತ್ತು ಪುರಾತನ ವಾಸ್ತು, ಶಿಲ್ಪಕಲೆ, ಇತಿಹಾಸ ಹಿನ್ನೆಲೆಯಲ್ಲಿರುವ ಬನವಾಸಿಯನ್ನು ತಾಲೂಕು ಕೇಂದ್ರವನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು.
ಬನವಾಸಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬೇಕು. ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ಕದಂಬೋತ್ಸವವನ್ನು ಪ್ರತಿವರ್ಷ ಕಡ್ಡಾಯವಾಗಿ ಆಚರಿಸಬೇಕು. ರೈತರು ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೂಡಲೇ ಅವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬೇಕ್ರಿ ರಮೇಶ್, ಪ್ರದೀಪ್ ನಾಯ್ಡು, ಗೈಬಸಾಬ್ ಕಲೆಭಾವಿ, ಮಹಾಬಲೇಶ್ವರ ಭಟ್, ಉಮ್ಮಡಹಳ್ಳಿ ನಾಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.