ಮಂಡ್ಯ

ಮಲೀನವಾಗುತ್ತಿರುವ ಕಾವೇರಿ: ಕರ್ನಾಟಕ ರಕ್ಷಣಾ ವೇದಿಕೆ ಕಿಡಿ

Published On :

ಶ್ರೀರಂಗಪಟ್ಟಣ: ಕೊಳಚೆ ನೀರು ಕಾವೇರಿ ನದಿಗೆ ಸೇರುತ್ತಿದ್ದರೂ ಪುರಸಭೆ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ಪೊಲೀಸ್ ಕ್ವಾಟ್ರರ್ಸ್ ಹಾಗೂ ಅಕ್ಕಪಕ್ಕದ ಮನೆಗಳಿಂದ ಬಂದ ಮಲ- ಮೂತ್ರ ವಿಸರ್ಜನೆಯ ಶೌಚಾಲಯದ ನೀರು ನೇರವಾಗಿ ಕಾವೇರಿ ನದಿಗೆ ಸೇರುತ್ತಿದೆ. ಇದನ್ನು ತಡೆಗಟ್ಟುವಲ್ಲಿ ಪುರಸಭೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಕಾವೇರಿ ನದಿ ಕೆಳಭಾಗದ ಗಂಜಾಂನಲ್ಲಿ ನಿಮಿಷಾಂಬ ದೇವಸ್ಥಾನವಿರುವುದರಿಂದ, ದೇವರ ದರ್ಶನಕ್ಕೆ ತೆರಳುವ ಭಕ್ತರು ನದಿಯಲ್ಲಿ ಸ್ನಾನ ಮಾಡಿ ಕಾವೇರಿ ನೀರು ಪಾವನವೆಂದು ಕುಡಿಯುವುದು ವಾಡಿಕೆ. ಶೌಚಾಲಯದ ನೀರು ನೇರವಾಗಿ ನದಿಗೆ ಸೇರುತ್ತಿರುವುದರಿಂದ ನದಿಯಲ್ಲಿ ಸ್ನಾನ ಮಾಡುವ ಭಕ್ತರಿಗೆ ಹಾಗೂ ಇಲ್ಲಿ ಬಟ್ಟೆ ಒಗೆಯುವ ಸ್ಥಳೀಯರಿಗೆ ಚರ್ಮದ ಕಾಯಿಲೆ ಹರಡುವುದಾಗಿ ಆತಂಕ ವ್ಯಕ್ತಪಡಿಸಿದರು.
ವಿವಿಧ ಮೂಲಗಳಿಂದ ಪುರಸಭೆ ಬೊಕ್ಕಸಕ್ಕೆ ಕೋಟ್ಯಂತರ ರು. ಹಣ ಹರಿದು ಬರುತ್ತಿದೆ. ಆದರೆ, ಕೊಳಚೆ ನೀರು ಬೇರೆ ಕಡೆ ಹರಿಯುವ ವ್ಯವಸ್ಥೆ ಮಾಡುವಲ್ಲಿ ಪುರಸಭೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಪುರಸಭೆ ಅಧಿಕಾರಿಗಳು ಈ ಬಗ್ಗೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಪುರಸಭೆ ಕಚೇರಿ ಎದುರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕರವೇ ತಾಲೂಕು ಅಧ್ಯಕ್ಷ ಕೆ.ಬಿ. ಬಸವರಾಜು, ನಗರ ಘಟಕದ ಅಧ್ಯಕ್ಷ ಗಂಜಾಂ ಯೋಗ, ಜಿಲ್ಲಾ ಉಪಾಧ್ಯಕ್ಷರಾದ ಗಂಜಾಂ ಪುಟ್ಟರಾಮು, ಚಿಂದಿಗಿರಿಕೊಪ್ಪಲು ಚಂದ್ರನಾಗ, ತಮ್ಮಣ್ಣ, ಡಿ. ಕೃಷ್ಣಪ್ಪ, ಬಾಲಸುಬ್ರಹ್ಮಣ್ಯ, ನಾರಾಯಣ, ನಾಗರಾಜು, ಮರಳಾಗಾಲ ಮಂಜು, ಮಲ್ಲಿಕ, ಪೂರ್ಣಚಂದ್ರ, ಮರಿಲಿಂಗು ಸೇರಿದಂತೆ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.