ಮಹಿಳಾ ಸಮಾನತೆ ವಿವೇಕಾನಂದರ ಆಶಯ
ಮದ್ದೂರು: ಸಮಾಜದಲ್ಲಿ ಪುರುಷರಂತೆ ಮಹಿಳೆಯರಿಗೂ ಸಮಾನ ಅವಕಾಶ ಸಿಗಬೇಕು ಎಂಬುದು ವಿವೇಕಾನಂದರ ಆಶಯವಾಗಿತ್ತು ಎಂದು ಸಾಹಿತಿ ಪ್ರೊ. ಕರಿಮುದ್ದೀನ್ ಬುಧವಾರ ಹೇಳಿದರು.
ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಸಹಯೋಗದಲ್ಲಿ ನಡೆದ ವಿವೇಕಾನಂದ ಹಾಗೂ ನೇತಾಜಿ ಸುಭಾಷ್‌ಚಂದ್ರ ಬೋಸ್ ಒಂದು ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರು ಜಗತ್ತಿನಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ಇಬ್ಬರು ಹೆಚ್ಚು ಕಾಲ ಜೀವಿಸದಿದ್ದರೂ ತಮ್ಮ ಆದರ್ಶಗಳನ್ನು ಸಮಾಜಕ್ಕೆ ಬಿಟ್ಟು ಹೋಗಿದ್ದಾರೆ ಎಂದರು.
ಪುರುಷರಂತೆ ಮಹಿಳೆಯರಿಗೂ ಸಮಾನ ಅವಕಾಶ ಸಿಗಬೇಕು ಎಂಬ ತತ್ವ ಸಿದ್ಧಾಂತಗಳನ್ನು ಹೊಂದಿದ್ದ ವಿವೇಕಾನಂದರು, ಸಮಾಜದ ಮೊದಲ ವ್ಯಕ್ತಿಗೆ ಸಿಗುವ ಸವಲತ್ತುಗಳು ಕಟ್ಟಕಡೆಯ ಮನುಷ್ಯನಿಗೂ ದೊರಕಬೇಕು ಎಂಬುದು ಅವರ ಆಶಯವಾಗಿತ್ತು ಎಂದು ಹೇಳಿದರು.
ಭಾರತೀಯರಿಗೆ ಕೀಳರಿಮೆ ಬಿಡುವಂತೆ ಮೊಟ್ಟ ಮೊದಲ ಸಂದೇಶ ನೀಡಿದ್ದ ವಿವೇಕಾನಂದ ಮತ್ತು ನೇತಾಜಿ ಅವರ ಆದರ್ಶಗಳ ಬಗ್ಗೆ ಯುವ ಪೀಳಿಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಮಂಡ್ಯ ಕೃಷಿಕ ಲಯನ್ಸ್ ಸಂಸ್ಥೆ ಅಧ್ಯಕ್ಷ ಕೆ.ಟಿ.ಹನುಮಂತು ಮಾತನಾಡಿ, ವಿವೇಕಾನಂದ ಸೇರಿದಂತೆ ರಾಷ್ಟ್ರದ ಯಾವುದೇ ಮಹಾನ್ ನಾಯಕರ ದಿನಾಚರಣೆಗಳು ಕೇವಲ ಭಾಷಣ ಮತ್ತು ಉಪನ್ಯಾಸಗಳಿಗೆ ಸೀಮಿತವಾಗಬಾರದು. ಅವರ ತತ್ವಗಳನ್ನು ಎಲ್ಲಾ ವರ್ಗದ ಜನರಿಗೆ ತಿಳಿಸುವ ಕಾರ್ಯಕ್ರಮಗಳು ನಡೆಯಬೇಕು ಎಂದರು.
ಯುವ ಪೀಳಿಗೆ ವಿವೇಕಾನಂದ ಮತ್ತು ನೇತಾಜಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶದ ಅಭಿವೃದ್ಧಿಗೆ ಬುನಾದಿ ಹಾಕುವಂತೆ ಸಲಹೆ ಮಾಡಿದರು.
ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಪ್ರೊ. ಪ್ರಭಾ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ.ಪದ್ಮಾಲಿಂಗಣ್ಣ, ದೈಹಿಕ ಶಿಕ್ಷಣ ಶಿಕ್ಷಕ ಶ್ರೀಕಂಠಯ್ಯ ಹಾಗೂ ಗೃಹ ರಕ್ಷಕ ದಳದ ಅಧಿಕಾರಿ ಗಿರೀಶ್ ಅವರನ್ನು ಸನ್ಮಾನಿಸಿದರು.
ಆಶುಭಾಷಣ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಾಂಶುಪಾಲ ರಾಮಕೃಷ್ಣ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಎಂ.ಐ. ಪ್ರವೀಣ್, ಯುವ ಮುಖಂಡ ತೈಲೂರು ರಘು, ಕೃಷಿ ಫೌಂಡೇಷನ್ ಟ್ರಸ್ಟ್ ನಿರ್ದೇಶಕಿ ಪ್ರಿಯಾಂಕ, ತಾಪಂ ಮಾಜಿ ಅಧ್ಯಕ್ಷ ಕೆ.ಸಿ. ಪ್ರಕಾಶ್, ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಅಧ್ಯಕ್ಷ ಎನ್. ಪ್ರಸನ್ನ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

