ಇಂದು ಪುನರ್ವಸು ಉತ್ಸವ
ಮೇಲುಕೋಟೆ: ಆಚಾರ್ಯ ರಾಮಾನುಜರು 12ನೇ ಶತಮಾನದಲ್ಲಿ ಮೇಲುಕೋಟೆ ನಾರಾಯಣಸ್ವಾಮಿಯನ್ನು ಜಗತ್ತಿಗೆ ಪ್ರಕಾಶಪಡಿಸಿ ಮೇಲುಕೋಟೆಯನ್ನು ಜೀರ್ಣೋದ್ಧಾರಗೊಳಿಸಿದ ಪ್ರತೀಕವಾಗಿ ನಡೆಯುವ ಪುನರ್ವಸು ಉತ್ಸವ ಚೆಲುವರಾಯಸ್ವಾಮಿ ದೇವಾಲಯದಲ್ಲಿ ಶನಿವಾರ ವಿಜೃಂಭಣೆಯಿಂದ ನಡೆಯಲಿದೆ. ಬೆಳಗ್ಗೆ ನಾಲ್ಕು ಗಂಟೆಗೆ ರಾಮಾನುಜರ ಉತ್ಸವ ಕಲ್ಯಾಣಿಗೆ ನಡೆಯುತ್ತದೆ. ಅಲ್ಲಿ ವಿಶೇಷ ಪೂಜೆ ನೆರವೇರಿದ ನಂತರ 10 ಗಂಟೆಯ ವೇಳೆಗೆ ವಿಶೇಷ ಮಂಗಳವಾದ್ಯಗಳೊಂದಿಗೆ ರಾಮಾನುಜರ ಉತ್ಸವ ದೇವಾಲಯಕ್ಕೆ ಆಗಮಿಸುತ್ತದೆ. ನಂತರ ತಿರುನಾರಾಯಣಸ್ವಾಮಿಗೆ ಮಹಾಮಂಗಳಾರತಿ ನೆರವೇರುತ್ತದೆ. ಪುನರ್ವಸು ಮಹೋತ್ಸವದ ಅಂಗವಾಗಿ ಶನಿವಾರ ಇಡೀ ದಿನ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರುತ್ತವೆ. ಚೆಲುವರಾಯಸ್ವಾಮಿ ದೇವಾಲಯದಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಯವರೆಗೆ ಭಕ್ತಾದಿಗಳಿಗೆ ದೇವರ ದರ್ಶನ ಅವಕಾಶ ಇರುವುದಿಲ್ಲ ಎಂದು ಕಾರ್ಯನಿರ್ವಾಹಕ ಅಧಿಕಾರಿ ವೇಣುಗೋಪಾಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

