ವಿದ್ಯುತ್ ನೀಡದೇ ವಂಚನೆ: ಆರೋಪ
ಮಂಡ್ಯ: ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ವಿದ್ಯುತ್ ನೀಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಚೆಸ್ಕಾಂ ಕಚೇರಿಗೆ ಮುತ್ತಿಗೆ ಬೀಗ ಜಡಿದು ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಸೆಸ್ಕಾಂ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿದ ಹೊಡಾಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಮರ್ಪಕ ವಿದ್ಯುತ್ ನೀಡದ ಕಾರಣ ರೈತರು ಬೋರ್ವೆಲ್ ಮತ್ತು ಪಂಪ್ಸೆಟ್ಗಳನ್ನು ನಂಬಿ ಬೆಳೆಯುತ್ತಿರುವ ಬೆಳೆಗಳು ಸಂಪೂರ್ಣವಾಗಿ ಒಣಗುತ್ತಿವೆ. ಇದಕ್ಕೆ ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದರು.
ಸರ್ಕಾರ ನಿಗದಿಪಡಿಸಿರುವಂತೆ ದಿನಕ್ಕೆ 5 ಗಂಟೆ ಸಿಂಗಲ್ ಫೇಸ್, 3 ಗಂಟೆ ತ್ರಿಫೇಸ್ ವಿದ್ಯುತ್ ಕೊಡಬೇಕು. ಆದರೆ, ದಿನಕ್ಕೆ 2 ಗಂಟೆ ಮಾತ್ರ ವಿದ್ಯುತ್ ಕೊಡುತ್ತಿದ್ದಾರೆ. ಅಲ್ಲದೆ, ಈಗ ಕೊಡುತ್ತಿರುವ ವಿದ್ಯುತ್ಅನ್ನು ಕೂಡಾ ಕಡಿತಗೊಳಿಸುತ್ತಿದ್ದಾರೆ ಎಂದು ದೂರಿದರು.
ಕೂಡಲೇ ಅಧಿಕಾರಿಗಳು ತಮ್ಮಲ್ಲಿನ ತಾಂತ್ರಿಕ ದೋಷ ಸರಿಪಡಿಸಿಕೊಂಡು ಸರಿಯಾದ ವಿದ್ಯುತ್ ನೀಡಬೇಕು. ಒಂದು ವೇಳೆ ರೈತರು ಬೆಳೆ ನಷ್ಟಕ್ಕೆ ಒಳಗಾಗದರೆ ಸರ್ಕಾರದ ಆದೇಶ ಉಲ್ಲಂಘನೆ ಆರೋಪದ ಮೇಲೆ ಅಧಿಕಾರಿಗಳ ಮೇಲೆ ದಾವೆ ಹೂಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ನಾಗಣ್ಣ, ಪಂಚಲಿಂಗೇಗೌಡ, ಶಿವರಾಮೇಗೌಡ, ರಮೇಶ್, ಶಂಕರೇಗೌಡ, ಶಿವಲಿಂಗೇಗೌಡ, ಗೋವಿಂದ, ಸಿದ್ದರಾಮು, ಸರೋಜಮ್ಮ ಸೇರಿದಂತೆ, ಹೊಡಾಘಟ್ಟ, ಕೀಲಾರ, ನಲ್ಲಹಳ್ಳಿ, ಈಚಗೆರೆ, ಆಲಕೆರೆ, ದೊಡ್ಡಬಾಣಸವಾಡಿ, ಚಿಕ್ಕಬಾಣಸವಾಡಿ, ಹೊನ್ನಾಯ್ಕನಹಳ್ಳಿಯ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

