ಎಸ್‌ಎಸ್‌ಎಲ್‌ಸಿಗೆ 3378 ಮಂದಿ
ಕೆ.ಆರ್.ಪೇಟೆ: ಏ.1ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನಿಂದ ಒಟ್ಟು 3378 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಾಣಾಧಿಕಾರಿ ಎ.ಬಿ. ಪುಟ್ಟಸ್ವಾಮಿಗೌಡ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 11ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟು ವಿದ್ಯಾರ್ಥಿಗಳ ಪೈಕಿ 1771 ಹೆಣ್ಣು ಮಕ್ಕಳು, 1667ಮಂದಿ ಗಂಡು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದರು. ಪಟ್ಟಣದಲ್ಲಿ ಮೂರು, ಕಿಕ್ಕೇರಿಲ್ಲಿ ಎರಡು, ಸಂತೇಬಾಚಹಳ್ಳಿ, ಬೂಕನಕೆರೆ, ಅಕ್ಕಿಹೆಬ್ಬಾಳು, ಶೀಳನೆರೆ, ಗಂಜಿಗೆರೆ, ಹೇಮಗಿರಿಗಳಲ್ಲಿ ತಲಾ ಒಂದೊಂದು ಪರೀಕ್ಷಾ ಕೇಂದ್ರಗಳಲ್ಲಿ ತೆರೆಯಲಾಗಿದೆ. ನಕಲು ತಡೆಯಲು ಜಾಗೃತ ಮತ್ತು ತಪಾಸಣಾ ದಳಗಳನ್ನು ರಚಿಸಲಾಗಿದೆ ಎಂದರು. ಪರೀಕ್ಷೆ ನಡೆಯುವ ಸಮೀಪದ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ನಿರ್ಬಂಧಿಸಲಾಗಿದೆ. ಮುಕ್ತ ಸುವ್ಯವಸ್ಥಿತ ಪರೀಕ್ಷೆ ನಡೆಸುವ ದೃಷ್ಟಿಯಿಂದ ವಿಡಿಯೋ ಚಿತ್ರೀಕರಣ ಮಾಡಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

