ಮಂಡ್ಯ

'ವಿವಿಗೆ ಅಂತಾರಾಷ್ಟ್ರೀಯಮಟ್ಟದ ಗೌರವ ದಕ್ಕಿಸುವುದು ಕುಲಪತಿ ಕಾರ್ಯವಾಗಲಿ'

Published On :

ಕ.ಪ್ರ.ವಾರ್ತೆ, ಮಂಡ್ಯ, ಮಾ.29
ನಗರದ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ಪ್ಲೇಸ್‌ಮೆಂಟ್ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಸಮಾರಂಭದಲ್ಲಿ ವಿವಿಧ ವಿಶ್ವವಿದ್ಯಾನಿಲಯಗಳ ಮೂವರು ಕುಲಪತಿಗಳಿಗೆ ಸಾರ್ವಜನಿಕ ಅಭಿನಂದನೆ ಸಲ್ಲಿಸಲಾಯಿತು.
ಸಮಾರಂಭದಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಬಿ.ತಿಮ್ಮೇಗೌಡ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಎಂ.ಜಿ. ಕೃಷ್ಣನ್ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಹಿ.ಚಿ. ಬೋರಲಿಂಗಯ್ಯ ಅವರನ್ನು ಕೃಷಿ ವಿವಿ ಕುಲಪತಿ ಪ್ರೊ. ಕೆ.ನಾರಾಯಣಗೌಡ ಆತ್ಮೀಯವಾಗಿ ಅಭಿನಂದಿಸಿದರು.
ನಂತರ ಮಾತನಾಡಿದ ನಾರಾಯಣಗೌಡ, ವಿವಿಗಳ ಕುಲಪತಿ ಹುದ್ದೆ ಸವಾಲಿನದ್ದು. ಅದನ್ನು ಸಮರ್ಥವಾಗಿ ನಿಭಾಯಿಸಲು ಸಮಯಪ್ರಜ್ಞೆ ಮತ್ತು ಪಾರದರ್ಶಕವಾಗಿ ಕೆಲಸ ಮಾಡಬೇಕು. ಆಗ ಮಾತ್ರ ಸಂಸ್ಥೆಗೆ ಆಗುವ ನಷ್ಟವನ್ನು ತಪ್ಪಿಸಲು ಸಾಧ್ಯ ಎಂದರು.
ಕುಲಪತಿಗಳು ವಿವಿಗೆ ಅಂತರ ರಾಷ್ಟ್ರೀಯಮಟ್ಟದಲ್ಲಿ ಗೌರವ-ಮನ್ನಣೆ ದೊರಕುವಂತಹ ಕೆಲಸಗಳನ್ನು ಮಾಡಬೇಕು. ಇದರಿಂದ ಸಾರ್ವಜನಿಕ ಜೀವನದಲ್ಲಿಯೂ ಕುಲಪತಿಗಳಿಗೆ ಹೆಚ್ಚಿನ ಗೌರವ ಸಿಗುತ್ತದೆ ಎಂದು ಹೇಳಿದರು.
ಚುಂಚನಗಿರಿಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಸಂಸದ ಜಿ.ಮಾದೇಗೌಡ, ಮಾಜಿ ಶಾಸಕರಾದ ಎಚ್.ಡಿ. ಚೌಡಯ್ಯ, ಕೆ.ಟಿ. ಶ್ರೀಕಂಠಯ್ಯ, ಕರ್ನಾಟಕ ಸಂಘ ಅಧ್ಯಕ್ಷ ಜಯಪ್ರಕಾಶ್ ಗೌಡ, ಕಸಪಾ ಜಿಲ್ಲಾ ಘಟಕ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.