ಮಂಡ್ಯ

ಏ.8ಕ್ಕೆ ಜೆಡಿಎಸ್ ಸಮಾವೇಶ

Published On :

ಮಂಡ್ಯ: ಮೇಲುಕೋಟೆ ಕ್ಷೇತ್ರ ವ್ಯಾಪ್ತಿಯ ಮಲ್ಲನಾಯಕನಕಟ್ಟೆ ಗ್ರಾಮದಲ್ಲಿ ಏ.8ರಂದು ಜೆಡಿಎಸ್ ವತಿಯಿಂದ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಜಿ.ಬಿ.ಶಿವಕುಮಾರ್ ತಿಳಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಅನೇಕ ನಾಯಕರು ಭಾಗವಹಿಸಲಿದ್ದಾರೆ. ಸಮಾವೇಶದ ಸಿದ್ಧತೆಗಾಗಿ ಪಂಚಾಯ್ತಿವಾರು ಪ್ರಚಾರ ನಡೆಸಲಾಗುವುದು ಎಂದು ಹೇಳಿದರು. ಮಾಜಿ ಶಾಸಕ ಎಚ್.ಬಿ.ರಾಮು ಮಾತನಾಡಿದರು. ಜಿಪಂ ಉಪಾಧ್ಯಕ್ಷ ಡಾ.ಶಂಕರೇಗೌಡ, ಸದಸ್ಯ ಮಾದಪ್ಪ, ಶಿವಣ್ಣ, ಸಿದ್ದರಾಮಯ್ಯ ಇದ್ದರು.
ವಿದ್ಯುತ್ ವ್ಯತ್ಯಯ
ಮಂಡ್ಯ: ತಾಲೂಕಿನ ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ದುರಸ್ತಿ ಕಾರಣ ಮಾ.31ರಂದು ಈ ವ್ಯಾಪ್ತಿಯ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ  ಸಹಕರಿಸಬೇಕು ಎಂದು ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.
ಸಾಮೂಹಿಕ ವಿವಾಹ
ಮದ್ದೂರು: ಭಾರತೀ ಎಜುಕೇಷನ್ ಟ್ರಸ್ಟ್ ವತಿಯಿಂದ ತಾಲೂಕಿನ ಹನುಮಂತನಗರ ಆತ್ಮಲಿಂಗೇಶ್ವರ ದೇವಸ್ಥಾನದಲ್ಲಿ ಮಾ.31ರಂದು 21ನೇ ವರ್ಷದ ಉಚಿತ ಸಾಮೂಹಿಕ ಸರಳ ವಿವಾಹ ಸಮಾರಂಭ ನಡೆಯಲಿದೆ. ವಧು-ವರರಿಗೆ ಸೀರೆ, ರವಿಕೆ ಕಣ, ತಾಳಿ, ಷರ್ಟು, ಟವಲು ಮತ್ತು ಪಂಚೆಯನ್ನು ನೀಡಲಾಗುವದು ಎಂದು ದೇವಸ್ಥಾನದ ಧರ್ಮದರ್ಶಿ ತಿಳಿಸಿದ್ದಾರೆ.
ಅಭಿನಂದನೆ
ಮಂಡ್ಯ: ನೂತನ ಜಿಲ್ಲಾಧಿಕಾರಿ ಅಜಯ್ ನಾಗಭೂಷಣ್ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ವಾಹನ ಚಾಲಕರ ಜಿಲ್ಲಾ ಸಂಘದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಶಾಖೆ ಅಧ್ಯಕ್ಷ ಆನಂದ್, ಉಪಾಧ್ಯಕ್ಷ ಪಿ.ಶ್ರೀಧರ್, ಗೌರವಾಧ್ಯಕ್ಷ ಎಚ್.ಸಿ.ವಿಷಕಂಠ, ಖಜಾಂಚಿ ಕೆ.ಆರ್.ಬನ್ನಾರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಯ್ಯ, ಜಂಟಿ ಕಾರ್ಯದರ್ಶಿ ಬಿ.ಎಂ.ಶಿವಸ್ವಾಮಿ, ಸಂಚಾಲಕರಾದ ಕಾಳೇಗೌಡ, ಮದ್ದೂರು ತಾಲೂಕು ಅಧ್ಯಕ್ಷ ಲಕ್ಷ್ಮಿನಾರಾಯಣ ಶೆಟ್ಟಿ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.