ಅಕ್ರಮ ಮಳಿಗೆಗಳ ತೆರವು
ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಮಳಿಗೆ ಕಟ್ಟಿಕೊಂಡಿದ್ದ ಮಳಿಗೆಗಳನ್ನು ತಹಸೀಲ್ದಾರ್ ಪ್ರಿಯದರ್ಶಿನಿ ನೇತೃತ್ವದಲ್ಲಿ ಶುಕ್ರವಾರ ತೆರವು ಗೊಳಿಸಲಾಯಿತು.
ನಗರದ ಹೃದಯ ಭಾಗದಲ್ಲಿರುವ ವಿಶ್ವೇಶ್ವರಯ್ಯ ರಸ್ತೆಗೆ ಹೊಂದಿಕೊಂಡಿರುವ 1 ಎಕರೆ 30 ಗುಂಟೆ ಜಾಗವನ್ನು ತೆರವುಗೊಳಿಸುವ ಮುನ್ನ ಕೆಲವು ಕಾಲ ಪ್ರಕ್ಷುಬ್ಧವಾದ ವಾತಾವರಣ ಉಂಟಾಗಿತ್ತು.
ಸರ್ಕಾರ ಶಿಕ್ಷಣ ಇಲಾಖೆಗೆ ಸೇರಿದ ಸರ್ವೆ ನಂಬರ್ 2ಮತ್ತು 3 ಹಾಗೂ 90 ರಲ್ಲಿರುವ ಈ ಜಾಗದಲ್ಲಿ ಕೆಲವು ವ್ಯಕ್ತಿಗಳು ಬಹಳ ವರ್ಷಗಳಿಂದ ಮಳಿಗೆಗಳನ್ನು ಕಟ್ಟಿಕೊಂಡು ಬಾಡಿಗೆ ನೀಡಿದ್ದರು. ಕೆಲವರು ಸ್ವಂತಕ್ಕೂ ವ್ಯಾಪಾರ ಮಾಡಿಕೊಂಡಿದ್ದರು. ಈ ಜಾಗವು ಶಿಕ್ಷಣ ಇಲಾಖೆಗೆ ಸೇರಿದ್ದು ಎಂದು ಜಿಲ್ಲಾಧಿಕಾರಿಗಳು ಹಾಗೂ ಉಪ ನಿರ್ದೇಶಕರು ರಾಜ್ಯ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ರಾಜ್ಯ ಉಚ್ಚ ನ್ಯಾಯಾಲಯದ ಆದೇಶದಂತೆ ಶಿಕ್ಷಣ ಇಲಾಖೆಗೆ ಸೇರಿದ ಜಾಗವನ್ನು ತೆರವುಗೊಳಿಸಲು ತಹಸೀಲ್ದಾರ್ ಪ್ರಿಯದರ್ಶಿನಿ ಹಾಗೂ ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳ ಬಿಗಿ ಬಂದೋಬಸ್ತಿನಲ್ಲಿ ಅಕ್ರಮ ಮಳಿಗೆಗಳಿಗೆ ಬೀಗ ಜಡೆದು, ಸೀಲ್ ಮಾಡಲಾಯಿತು.
ಭಾರಿ ಜನಸ್ತೋಮ: ವಿವಿ ರಸ್ತೆ ಸದಾ ಜನನಿಬಿಡ ರಸ್ತೆಯಾಗಿದೆ. ಹೀಗಾಗಿ ಅಕ್ರಮ ಅಂಗಡಿಗಳಿಗೆ ಬೀಗ ಜಡೆಯುವ ಕಾರ್ಯಕ್ಕೆ ತಾಲೂಕು ಆಡಳಿತ ಮುಂದಾದ ಸಂದರ್ಭದಲ್ಲಿ ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ಈ ಸಂದರ್ಭದಲ್ಲಿ ಜನರನ್ನು ನಿಯಂತ್ರಿಸುವುದೇ ಪೊಲೀಸರು ದೊಡ್ಡ ತಲೆನೋವಾಗಿ ಪರಿಣಮಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

