ಮಂಡ್ಯ

ಸಾಕ್ಷರತಾ ರಥ ಸಂಚಲನ ಉದ್ಘಾಟನೆ

Published On :

ಭಾರತೀನಗರ: ಪ್ರತಿಯೊಬ್ಬರಿಗೂ ಕಾನೂನು ಅರಿವು ಅತ್ಯಗತ್ಯವಾಗಿದೆ ಎಂದು ಮದ್ದೂರು ಎರಡನೇ ಅಪರ ಸಿವಿಲ್ ನ್ಯಾಯಾಧೀಶ ಪಿ.ಎಂ. ಪ್ರಕಾಶ್ ತಿಳಿಸಿದರು.
ಸಮೀಪದ ಮಾದರಹಳ್ಳಿ ಗ್ರಾಮದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ತಾಲೂಕು ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಸಾಕ್ಷರತಾ ರಥ ಸಂಚಲನ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
  ಸಹಾಯಕ ಸರ್ಕಾರಿ ಅಭಿಯೋಜಕ ಎಸ್. ಮಹದೇವಸ್ವಾಮಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಾನೂನು ದುರುಪಯೋಗವಾಗುತ್ತಿವೆ. ಕಾನೂನಿನಲ್ಲಿ ತಿದ್ದುಪಡಿಗಳು ಅವಶ್ಯವಾಗಿವೆ ಎಂದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಗಿರಿಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಶಿವಕುಮಾರ್, ಪ್ರಧಾನ ಸಿವಿಲ್ ನ್ಯಾ. ಎಂ.ಮನೋಹರ್, ಕ್ಷೇತ್ರ ಶಿಕ್ಷಣಾಧಿಕಾರಿ ಕಾಳೀರಯ್ಯ, ವಕೀಲರ ಸಂಘದ ತಾಲೂಕು ಅಧ್ಯಕ್ಷ ಎಚ್. ಮಾದೇಗೌಡ, ಎಂ. ಎಂ. ಪ್ರಶಾಂತ್, ಡಿ. ಕೆ. ಪ್ರಭಾಕರ್, ಸರ್ಕಲ್ ಇನ್ಸ್‌ಪೆಕ್ಟರ್ ಗೋಪಾಲ್, ಸಂಪನ್ಮೂಲ ಭಾಷಣಕಾರರಾಗಿ ವಕೀಲರಾದ ದೇವರಾಜು, ಎನ್. ಪುಟ್ಟಸ್ವಾಮಿ, ಬಾಲರಾಜು, ಸಿಆರ್‌ಸಿ ಗಾಯತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.