ಮಂಡ್ಯ

ತಾಪಂ ಅಧ್ಯಕ್ಷ ಸಿ.ನಾಗೇಗೌಡ ಅಧಿಕಾರ ಸ್ವೀಕಾರ

Published On :

ಮದ್ದೂರು: ತಾಲೂಕು ಪಂಚಾಯ್ತಿ ಅಧ್ಯಕ್ಷ ಸಿ.ನಾಗೇಗೌಡ, ಉಪಾಧ್ಯಕ್ಷೆ ಗಂಗಾಬಲರಾಮ್  ಅಧಿಕಾರ ಸ್ವೀಕರಿಸಿದರು. ಪಟ್ಟಣದ ತಾಪಂ ಕ:ಕೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಒ ಸೋಣ್ಣೇಗೌಡ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷ ಸಿ.ನಾಗೇಗೌಡ, ತಾಲೂಕಿನಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಅನೇಕ ಮೂಲಭೂತ ಸಮ್ಯಸೆಗಳು ಕಾಡುತ್ತಿವೆ. ಇಂತಹ ಸಮಸ್ಯೆಗಳ ಪರಿಹಾರ ಕುರಿತು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಸಮಸ್ಯೆ ಪರಿಹಾರಕ್ಕೆ ಪಕ್ಷಾತೀತವಾಗಿ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದರು. ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಕೆ.ಪಿ.ಸಿ.ಸಿ.ಸದಸ್ಯ ಎಸ್.ಗುರುಚರಣ್, ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ತಾ.ಪಂ ಸದಸ್ಯರಾದ ರಾಮಚಂದ್ರ. ಸುನಂದ, ಕೆ.ಆರ್.ಮಹೇಶ್ಮ, ಶೋಭ, ರಾಜೀವ್, ಸುಜಾತ, ಗೀತ ಜಗದೀಶ್, ಇಂದ್ರಾಣಿ, ನೀಲಮ್ಮ, ರಾಜಣ್ಣ, ಪುರಸಭಾ ಸದಸ್ಯರಾದ ಸಿ.ಸಿ.ಮಹೇಶ್, ರಘು, ವಿಜಯಕುಮಾರ್ ಮುಖಂಡರು ಅಭಿನಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.