ಮಂಡ್ಯ

ಕರವೇ ಪ್ರತಿಭಟನೆ

Published On :

ಮಂಡ್ಯ: ವಿಶ್ವೇಶ್ವರಯ್ಯ ನಾಲೆ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಿ ಬೆಳೆಗಳನ್ನು ರಕ್ಷಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಮೆರವಣಿಗೆಯಲ್ಲಿ ಕಾವೇರಿ ನೀರಾವರಿ ನಿಗಮದ ಕಚೇರಿಗೆ ತೆರಳಿ ಧರಣಿ ಕುಳಿತರು.
ಬ್ಯಾಂಕುಗಳು ಮತ್ತು ಖಾಸಗಿಯವರಿಂದ ಸಾಲ ಪಡೆದು ಬೆಳೆಗಳಿಗೆ ಬಂಡವಾಳ ಹಾಕಿದ ರೈತರು ನೀರಿಲ್ಲದೆ ಫಸಲು ಕೈ ತಪ್ಪುವ ಆತಂಕದಲ್ಲಿದ್ದಾರೆ. ಇದರಿಂದ ದಿಕ್ಕು ತೋಚದಂತಾಗಿರುವ ರೈತರು ಗುಳೆ ಹೊರಡಲು ಆರಂಭಿಸಿದ್ದು, ಇದನ್ನು ತಪ್ಪಿಸಬೇಕಾದರೆ ಅಣೆಕಟ್ಟೆಯಿಂದ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿದರು.
ರೈತರು ಸಂಕಷ್ಟಕ್ಕೆ ಸಿಲುಕಲು ರಾಜ್ಯ ಸರ್ಕಾರ ಕಾರಣವಾಗಿದೆ. ಕೆಆರ್‌ಎಸ್ ಅಣೆಕಟ್ಟೆ ಭರ್ತಿಯಾಗುತ್ತಿದ್ದರೂ ನಾಲೆಗಳಿಗೆ ನೀರು ಹರಿಸುತ್ತಿಲ್ಲ. ಬದಲಿಗೆ ತಮಿಳುನಾಡಿಗೆ ನೀರು ಹರಿಸುವ ಮೂಲಕ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಬೆಳೆ ನಷ್ಟದಿಂದ ಕಂಗಾಲಾಗಿರುವ ರೈತರ ಬ್ಯಾಂಕ್ ಸಾಲ ಮನ್ನಾ ಮಾಡಬೇಕು. ಜಿಲ್ಲೆಯೂ ಬರ ಪ್ರದೇಶವಾದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಯಾವುದೇ ಕಂದಾಯ, ವಿದ್ಯುತ್ ಬಾಕಿಯನ್ನು ವಸೂಲಿ ಮಾಡಬಾರದು. ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕರವೇ ಮುಖಂಡರಾದ ವಿ.ಸಿ. ಉಮಾಂಶಕರ್, ಎಂ.ಎಸ್. ಚಿದಂಬರ್, ಸೌಭಾಗ್ಯ ಮಹದೇವು, ಅಶೋಕ್, ನಾರಾಯಣಪ್ಪ, ಪುನೀತ್ ಗೌಡ, ಜಿತೇಂದ್ರ, ಎಸ್.ಅಶೋಕ್ ಮತ್ತಿತರರು ಭಾಗವಹಿಸಿದ್ದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.