'ಗಾಂಧೀಜಿ ಕನಸು ನುಚ್ಚುನೂರಾಗಿದೆ'
ಮೈಸೂರು: ದೇಶದಲ್ಲಿ ತಲೆದೋರಿರುವ ಭ್ರಷ್ಟಾಚಾರ, ಅರಾಜಕತೆಯಿಂದ ಗಾಂಧೀಜಿ ಕಂಡಿದ್ದ ರಾಮರಾಜ್ಯ ಕನಸು ನುಚ್ಚುನೂರಾಗಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ರಾಮಶೇಷ ವಿಷಾದಿಸಿದರು. ಮೈಸೂರು ವಿವಿ ನೇತಾಜಿ ಜನ್ಮ ಶತಮಾನೋತ್ಸವ ಸಮಿತಿ ಹಾಗೂ ನಟರಾಜ ಪ್ರತಿಷ್ಠಾನವು ನಗರದ ನಟರಾಜ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸುಭಾಷ್‌ಚಂದ್ರ ಬೋಸ್ ಅವರ 116ನೇ ಜನ್ಮ ಶತಾಬ್ಧಿ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಕಾರಾಗೃಹ ಶಿಕ್ಷೆ ಅನುಭವಿಸಿ, ಬ್ರಿಟಿಷರಿಂದ ವಿಮುಕ್ತಿ ಪಡೆದರೂ ಸಹ ನಮ್ಮ ಕಣ್ಣ ಮುಂದೆಯೇ ದೇಶ ಹಾಳಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಶಾಸಕ ಸಿದ್ದರಾಜು ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೂ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ ಎಂದರು. ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಡಿಸಿಪಿ ಬಸವರಾಜ ವೈ. ಮಾಲಗತ್ತಿ, ಡಾ.ಎಸ್. ಶಿವರಾಜಪ್ಪ, ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

