ಮೈಸೂರು

ಮಾನವನ ಸ್ವಾರ್ಥದಿಂದ ಹವಾಮಾನ ಬದಲು

Published On :

ಮೈಸೂರು: ಮಾನವನ ಸ್ವಾರ್ಥದಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗಿದ್ದು, ಈಗ ತನ್ನ ಉಳಿವಿಗಾಗಿ ಮಾನವನು ಹವಾಮಾನ ಬದಲಾವಣೆ ಬಗ್ಗೆ ಚಿಂತಿಸುವ ಪರಿಸ್ಥಿತಿ ಎದುರಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕ ಪ್ರೊ.ಟಿ.ಎನ್. ಪ್ರಭಾಕರ್ ಹೇಳಿದರು.
ಮಹಾರಾಣಿ ಮಹಿಳಾ ಕಲಾ ಮತ್ತು ವಾಣಿಜ್ಯ ಕಾಲೇಜಿನ ಭೂಗೋಳಶಾಸ್ತ್ರ ಸ್ನಾತಕೋತ್ತರ ವಿಭಾಗವು ಯುಜಿಸಿ ಪ್ರಾಯೋಕತ್ವದಲ್ಲಿ ಆಯೋಜಿಸಿರುವ ಸುಸ್ಥಿರ ಅಭಿವೃದ್ಧಿ, ಹವಾಗುಣ ಬದಲಾವಣೆ ಹಾಗೂ ಆಹಾರ ಭದ್ರತೆ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.
ಹವಾಮಾನ ಬದಲಾವಣೆ ಕುರಿತು ಪ್ರಾಣಿ ಪಕ್ಷಿಗಳು ಚಿಂತಿಸುವುದಿಲ್ಲ. ಅವು ತಮ್ಮ ಕರ್ತವ್ಯ ಬಿಟ್ಟು ಬೇರೆ ಏನನ್ನು ಮಾಡುವುದಿಲ್ಲ. ಆದರೆ, ಮನುಷ್ಯ ತನ್ನ ಕರ್ತವ್ಯ ಮರೆತು, ತನ್ನ ಮೂಲಭೂತ ಅಗತ್ಯತೆ ಹಾಗೂ ದುರಾಸೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಬೀರುವ ಚಟುವಟಿಕೆಗಳಲ್ಲಿ ನಿರತನಾಗಿದ್ದಾನೆ. ಮನುಷ್ಯ ತನ್ನ ಕರ್ತವ್ಯ ಮರೆತ ಕಾರಣ ಪ್ರಸ್ತುತ ಹವಾಮಾನ ಬದಲಾವಣೆ ಕುರಿತು ಚಿಂತಿಸುವ ಪರಿಸ್ಥತಿ ಬಂದಿದೆ ಎಂದು ತಿಳಿಸಿದರು.
ಸುಸ್ಥಿರ ಹಾಗೂ ಗುಣಾತ್ಮಕ ಅಭಿವೃದ್ಧಿ ಮಾತ್ರ ಪ್ರಯೋಜನಕಾರಿ ಆಗಿದೆ. ನಮ್ಮ ಭೂಮಿಯನ್ನು ಯಾವಾಗಲೂ ಸುಸ್ಥಿರವಾಗಿರುವಂತೆ ನೋಡಿಕೊಂಡು, ನಮ್ಮ ಮುಂದಿನ ಪೀಳಿಗೆಗೆ ಉಳಿಸಿಕೊಡಬೇಕಿದೆ ಎಂದರು.
ಬೆಂಗಳೂರು ವಿವಿ ಭೂಗೋಳಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಬಿ.ಈಶ್ವರಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮೈಸೂರು ವಿವಿ ಭೂಗೋಳಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಬಿ.ಎನ್. ಶಿವಲಿಂಗಪ್ಪ, ಮಹಾರಾಣಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಚ್.ಬಿ. ಮಲ್ಲಿಕಾರ್ಜುನಸ್ವಾಮಿ, ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಎ.ಕೆ. ಹಂಪಣ್ಣ ಇದ್ದರು. ಭೂಗೋಳಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ. ರಂಗನಾಥ್ ಸ್ವಾಗತಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.