ರೈತ ಸಂಜೀವಿನಿ ಯೋಜನೆಯಲ್ಲಿ ನೆರವು
ಹೊಸೂರು: ತಾಲೂಕಿನ 5 ಗ್ರಾಮಗಳಲ್ಲಿ ರೈತರ ಅನುಕೂಲಕ್ಕಾಗಿ ಕೃಷಿ ಕಣ ನಿರ್ಮಿಸಲು ಸರ್ಕಾರದಿಂದ 30 ಲಕ್ಷ ಬಿಡುಗಡೆಯಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಕರೆಯಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಕೆ.ಎಂ. ರಮೇಶ್ ಹೇಳಿದರು.
ಚುಂಚನಕಟ್ಟೆ ಹೋಬಳಿಯ ಕೆಸ್ತೂರು ಕೊಪ್ಪಲು ಗ್ರಾಮದಲ್ಲಿ ನಾಲೆಯಲ್ಲಿ ದನ ತೊಳೆಯಲು ಹೋಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದ, ರೈತ ಸ್ವಾಮಿಗೌಡ ಅವರ ಕುಟುಂಬಕ್ಕೆ ಎಪಿಎಂಸಿ ವತಿಯಿಂದ ರೈತ ಸಂಜೀವಿನಿ ಯೋಜನೆಯಡಿ 50 ಸಾವಿರ ಚೆಕ್ ವಿತರಿಸಿ ಅವರು ಮಾತನಾಡಿದರು. ಕೃಷಿ ಕಣಗಳನ್ನು ಮಾವತ್ತೂರು, ಮಾರಗೌಡನಹಳ್ಳಿ, ಗಂಧನಹಳ್ಳಿ, ಬಸವರಾಜಪುರ, ತಿಪ್ಪೂರು, ಗ್ರಾಮಗಳಲ್ಲಿ ನಿರ್ಮಿಸಲಾಗುತ್ತದೆ ಎಂದರು.
ತಾಲೂಕಿನಲ್ಲಿ 20 ತಿಂಗಳ ಅವಧಿಯಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಮೃತಪಟ್ಟ 9ಕ್ಕೂ ಹೆಚ್ಚು ರೈತರ ಕುಟುಂಬಕ್ಕೆ 4.50 ಲಕ್ಷಗಳನ್ನು ಈ ಯೋಜನೆಯಡಿ ವಿತರಿಸಲಾಗಿದೆ ಎಂದು ಹೇಳಿದರು. ಕೆಸ್ತೂರು ಗ್ರಾಪಂ ಅಧ್ಯಕ್ಷ ವೈ.ಎ. ಮಹದೇವ, ಎಪಿಎಂಸಿ ಕಾರ್ಯದರ್ಶಿ ಆರ್. ಬಸವರಾಜು, ಸತೀಶ್‌ಚಂದ್ರ, ಮೃತ ಸ್ವಾಮಿಗೌಡರ ಪತ್ನಿ ರತ್ನಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

