ಮೈಸೂರು

ಕಳಲೆಯಲ್ಲಿ ಶ್ರೀಲಕ್ಷ್ಮೀಕಾಂತ ಸ್ವಾಮಿ ರಥೋತ್ಸವ

Published On :

ಕ.ಪ್ರ. ವಾರ್ತೆ ್ಣ ನಂಜನಗೂಡು ್ಣ ಮಾ.29
ತಾಲೂಕಿನ ಕಳಲೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀಕಾಂತ ಸ್ವಾಮಿಯವರ ದಿವ್ಯ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.
ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಾರುಪತ್ತೇದಾರ್ ಜಯರಾಂ ರಥೋತ್ಸವಕ್ಕೆ ಬೆಳಗ್ಗೆ ಚಾಲನೆ ನೀಡಿದರು.
ಮಾಜಿ ಸಚಿವ ಎಂ.ಮಹದೇವ್ ಪಾಲ್ಗೊಂಡಿದ್ದರು. ಗ್ರಾಮೀಣ ಪ್ರದೇಶಗಳಲ್ಲಿ ಜಾತ್ರೆ, ಹಬ್ಬಗಳು ಅನೂಚಾನವಾಗಿ ನಡೆದು ಬಂದಿರುವ ಸಂಪ್ರದಾಯ. ಇಂತಹ ಉತ್ಸವಗಳಲ್ಲಿ ಭಾಗವಹಿಸುವುದರಿಂದ ವೈಯಕ್ತಿಕವಾಗಿ ಮನಸ್ಸಿಗೆ ಶಾಂತಿ, ನೆಮ್ಮದಿ, ಉತ್ಸಾಹ ಮತ್ತು ಬಾವೈಕ್ಯತೆ ಮೂಡುತ್ತದೆ ಎಂದರು.
ಅನುದಾನದ ಭರವಸೆ: ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕಿಂತಲೂ ಪುರಾತನವಾದ ಕಳಲೆ ಶ್ರೀ ಲಕ್ಷ್ಮೀಕಾಂತಸ್ವಾಮಿ ದೇವಾಲಯ ಅಭಿವೃದ್ಧಿ ಕಾಣದೆ ಶಿಥಿಲಾವಸ್ಥೆ ತಲುಪಿದೆ. ದೇವಾಲಯ ಅಭಿವೃದ್ಧಿಗಾಗಿ ಸರ್ಕಾರ ಮತ್ತು ಮುಜರಾಯಿ ಇಲಾಖೆಯೊಂದಿಗೆ ಮಾತನಾಡಿ, ಅನುದಾನಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಬೆಳಗ್ಗೆ 9ಕ್ಕೆ ರಥೋತ್ಸವ ಪ್ರಾರಂಭಗೊಂಡು ಗ್ರಾಮದ ರಥ ಬೀದಿಯಲ್ಲಿ ಚಲಿಸಿ ನೆರೆದ ಭಕ್ತರಲ್ಲಿ ಧನ್ಯತೆ ಮೂಡಿಸಿ ಯಾವುದೇ ಅಡ್ಡಿ ಆತಂಕಗಳಿಲ್ಲದ ಸ್ವಸ್ಥಾನ ತಲುಪಿತು. ಸುತ್ತಮುತ್ತಲ ಹತ್ತೂ ಗ್ರಾಮದ ಭಕ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿ ರಥಕ್ಕೆ ಹಣ್ಣು ಧವನ ಅರ್ಪಿಸಿ ಪುನೀತರಾದರು. ಕಂಸಾಳೆ ಸಂಘ, ಕಿಚ್ಚ ಸುದೀಪ್ ಯುವಕರ ಬಳಗ ಮುಂತಾದ ಸಂಘ ಸಂಸ್ಥೆಗಳಿಂದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಿತು.
ಕಳಲೆ ಎನ್.ಕೇಶವಮೂರ್ತಿ, ಗ್ರಾಪಂ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷೆ ಶಾಂತಮ್ಮ, ತಾಪಂ ಸದಸ್ಯ ಮಲ್ಲೇಶ್, ಮುಖಂಡರಾದ ಯು.ಎನ್. ಪದ್ಮನಾಭರಾವ್, ಗುರುಮಲ್ಲಪ್ಪ, ದೇವಸ್ಥಾನ ಮಂಡಳಿ ಅಧ್ಯಕ್ಷ ಸಂಪತ್‌ಕುಮಾರ್, ಪಿಡಿಒ ಪವನ್ ಕುಮಾರ್, ಗ್ರಾಮ ಲೆಕ್ಕಾಧಿಕಾರಿ ಲೋಹಿತ್, ಎಸ್‌ಐ ಹನುಮಂತರಾಜು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.