ಚುನಾವಣಾ ಅಕ್ರಮ ತಡೆಗೆ ನಿಯಂತ್ರಣ ಕೊಠಡಿ
ಕ.ಪ್ರ. ವಾರ್ತೆ ್ಣ ಹುಣಸೂರು ್ಣ ಮಾ.29
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹುಣಸೂರು ಉಪವಿಭಾಗ ವ್ಯಾಪ್ತಿಯ ಹುಣಸೂರು, ಪಿರಿಯಾಪಟ್ಟಣ, ಕೆ.ಆರ್. ನಗರ ಮತ್ತು ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿಯಂತ್ರಣ ಕೊಠಡಿ ತೆರೆಯಲಾಗಿದೆ.
ಶಾಂತಿಯುತ, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ ಹಾಗೂ ಅಕ್ರಮ ಮದ್ಯ ತಯಾರಿಕೆ, ಮಾರಾಟ, ದಾಸ್ತಾನು ಅಥವಾ ಸಾಗಣೆ ಮತ್ತು ವಿತರಣೆಯಂತಹ ಅಬಕಾರಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ನಾಲ್ಕೂ ತಾಲೂಕುಗಳಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ಅಬಕಾರಿ ಅಕ್ರಮಗಳು ಕಂಡುಬಂದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಕಚೇರಿಗೆ ಖುದ್ದಾಗಿ ಅಥವಾ ದೂರವಾಣಿ ಮೂಲಕ ದೂರು ಸಲ್ಲಿಸಬಹುದು. ಹುಣಸೂರು ಉಪವಿಭಾಗದ ದೂ. 08222-252434, ಹುಣಸೂರು ವಲಯಕ್ಕೆ ದೂ. 08222-251690, ಪಿರಿಯಾಪಟ್ಟಣ ವಲಯಕ್ಕೆ 08223-273373, ಕೆ.ಆರ್. ನಗರ ವಲಯಕ್ಕೆ 08223-264801 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

