ಮೈಸೂರು

ನಾಳೆ ಕರಾಟೆ ಸ್ಪರ್ಧೆ

Published On :

ಮೈಸೂರು: ವಡೋ ರಿಯು ಕರಾಟೆ ಡೊ ಸಂಸ್ಥೆಯು ಕರಾಟೆ ಬೆಸ್ಟ್ ಫೈಟರ್ ಚಾಂಪಿಯನ್‌ಶಿಪ್ ಸ್ಪರ್ಧೆಯನ್ನು ವಿಜಯನಗರದ ಸಪ್ತಸಾಗರ ಸಮುದಾಯ ಭವನ (ಗೌಡ ಸಮಾಜ) ದಲ್ಲಿ ಮಾ.31 ರಂದು ಏರ್ಪಡಿಸಿದೆ. 15 ವರ್ಷದ ಬಾಲಕರ ವಿಭಾಗದಲ್ಲಿ 40 ಕೆಜಿ ಒಳಗೆ ಹಾಗೂ ಮೇಲ್ಪಟ್ಟು, 15 ವರ್ಷ ಮೇಲ್ಪಟ್ಟ ಪುರುಷರ ವಿಭಾಗದಲ್ಲಿ 50 ಕೆಜಿ ಒಳಗೆ ಹಾಗೂ 51 ರಿಂದ 60 ಕೆಜಿ ಮತ್ತು 61 ಕೆಜಿ ಮೇಲ್ಪಟ್ಟ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ಸಂಸ್ಥೆ ಕಾರ್ಯದರ್ಶಿ ಎ.ಬಿ. ಚಿದಾನಂದ ತಿಳಿಸಿದ್ದಾರೆ. ಪ್ರತಿಯೊಂದು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 2 ಸಾವಿರ ಹಾಗೂ ಟ್ರೋಫಿ ಮತ್ತು ದ್ವಿತೀಯ ಸ್ಥಾನ ಗಳಿಸಿದವರಿಗೆ ಟ್ರೋಫಿ ವಿತರಿಸಲಾಗುವುದು.
ದತ್ತಿ ಉಪನ್ಯಾಸ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪಟೇಲ್ ನಂಜಪ್ಪ - ಪಾರ್ವತಮ್ಮ ಹಾಗೂ ಮಾದಯ್ಯ - ಪಾರ್ವತಮ್ಮಣ್ಣಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಮಾ.31 ರಂದು ಸಂಜೆ 5ಕ್ಕೆ ಅರಮನೆ ಉತ್ತರ ದ್ವಾರದಲ್ಲಿರುವ ಪರಿಷತ್ ಕಚೇರಿಯಲ್ಲಿ ಏರ್ಪಡಿಸಿದೆ. ಪ್ರೊ.ಮಲೆಯೂರು ಗುರುಸ್ವಾಮಿ ಅವರು ನಿಜಗುಣ ಶಿವಯೋಗಿಗಳ ಜೀವನ ಮತ್ತು ಸಾಧನೆ ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು. ನಂಜನಗೂಡು ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಮೊರಬದ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು ಎಂದು ಪರಿಷತ್ ಅಧ್ಯಕ್ಷ ಎಂ. ಚಂದ್ರಶೇಖರ್ ತಿಳಿಸಿದ್ದಾರೆ.
ಚಿಂತನಗೋಷ್ಠಿ ನಾಳೆ
ಮಂಥನ ಚಿಂತಕರ ವೇದಿಕೆ, ಭಾರತೀಯ ಇತಿಹಾಸ ಸಂಕಲನ ಸಮಿತಿ ಹಾಗೂ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಸಂಯುಕ್ತಾಶ್ರಯದಲ್ಲಿ ಮಾ.31 ರಂದು ಐತಿಹಾಸಿಕ ಹಿನ್ನೆಲೆಯಲ್ಲಿ ಅಯೋಧ್ಯಾ ಎಂಬ ವಿಷಯ ಕುರಿತು ಚಿಂತನಗೋಷ್ಠಿ ನಡೆಯಲಿದೆ. ಅಂದು ಬೆಳಗ್ಗೆ 10ಕ್ಕೆ ಇಲ್ಲಿನ ಮಾಧವ ಕೃಪದಲ್ಲಿ ಅಖಿಲ ಭಾರತ ಇತಿಹಾಸ ಸಂಕಲನ ಸಮಿತಿಯ ಸಂಘಟನಾ ಕಾರ್ಯದರ್ಶಿ ಬಾಲ ಮುಕುಂದ ಪಾಂಡೆ ಉಪನ್ಯಾಸ ನೀಡುವರು. ಸಮಿತಿ ಸಂರಕ್ಷಕ ಹರಿಭಾವ್ ವಝೆ ಅಧ್ಯಕ್ಷತೆ ವಹಿಸುವರು ಎಂದು ಮಂಥನ ವೇದಿಕೆ ಅಧ್ಯಕ್ಷ ಎ.ಎಸ್. ನಾಗರಾಜ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.