ಮೈಸೂರು

ಬಿಎಸ್‌ಆರ್‌ಗೆ ಹೋಗಿದ್ದ ರಾಜಶೇಖರ್ ಮತ್ತೆ 'ಕೈ'ಗೆ

Published On :

ಕ.ಪ್ರ. ವಾರ್ತೆ ್ಣ ಪಿರಿಯಾಪಟ್ಟಣ, ಮಾ.29
ಗುರುವಾರವಷ್ಟೆ ಕಾಂಗ್ರೆಸ್ ಪಕ್ಷ ತೊರೆದು ಬಿಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಜಿಪಂ ಮಾಜಿ ಸದಸ್ಯ ಹಾಗೂ ಹಾಲಿ ಎಪಿಎಂಸಿ ಸದಸ್ಯ ಎಸ್.ಟಿ. ರಾಜಶೇಖರ್ ಶುಕ್ರವಾರ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ದುಡುಕಿನ ತೀರ್ಮಾನದಿಂದಾಗಿ ಬಿಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕಾಯಿತು. ಇದರಿಂದಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ನೋವಾಗಿದ್ದರೆ ತಮ್ಮನ್ನು ಕ್ಷಮಿಸುವಂತೆ ಕೇಳಿದ ಎಸ್.ಟಿ. ರಾಜಶೇಖರ್ ತಮ್ಮ ಸಂಬಂಧಿಗಳು ಹಾಗೂ ಕೆಲವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಸ್ನೇಹಿತರು ತಾವು ಕಾಂಗ್ರೆಸ್ ತೊರೆದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕಾರಣ ಹಾಗೂ ಶಾಸಕರ ಬಗ್ಗೆ ತಮಗೆ ಇಂದಿಗೂ ಗೌರವವಿರುವ ಕಾರಣ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿರುವುದಾಗಿ ತಿಳಿಸಿದರು.
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಪುಟ್ಟರಾಜು, ಜಿಪಂ ಮಾಜಿ ಸದಸ್ಯ ಗೋಪಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾನ್ಸೂನ್‌ಚಂದ್ರು, ಪ್ರಧಾನ ಕಾರ್ಯದರ್ಶಿ ನೀಲಂಗಾಲ ಜಯಣ್ಣ, ಕಾರ್ಯದರ್ಶಿ ವೆಂಕಟೇಶ್, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಮಹಮ್ಮದ್ ಶಫಿ, ಕಾರ್ಯಕರ್ತರಾದ ಬಿ.ಜೆ. ಬಸವರಾಜ್, ಜಮೃದ್, ಪಾಲಾಕ್ಷ, ಪೆಪ್ಸಿ ಕುಮಾರ್, ಪಿ.ಆರ್. ಮಹದೇವ್, ನಾಗಣ್ಣ, ದೀಪಕ್, ಗಿರೀಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.