ಮೈಸೂರು

'ಯುವಜನತೆಗೆ ಸೇವಾ ಮನೋಭಾವವಿರಲಿ'

Published On :

ಕ.ಪ್ರ.ವಾರ್ತೆ ್ಣ ಮೈಸೂರು ್ಣ ಮಾ.29
ಇಂದಿನ ಯುವಜನತೆ ಸೇವಾ ಮನೋಭಾವವನ್ನು ಹೆಚ್ಚಾಗಿ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ.ಎಂ.ಜಿ. ಕೃಷ್ಣನ್ ಹೇಳಿದರು.
ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜು ವತಿಯಿಂದ ಆಯೋಜಿಸಿರುವ ಮೂರು ದಿನಗಳ ವಿದ್ಯುತ್ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಅನೇಕ ವರ್ಗದ ಜನರು ವಿವಿಧ ಸಮಸ್ಯೆಗಳಿಂದ ಬಳಲುತ್ತಿದ್ದು, ಇಂತಹ ಸಂದರ್ಭದಲ್ಲಿ ಯುವಜನತೆ ಅವರಿಗೆ ನೆರವಾಗುವ ಮೂಲಕ ಸಹಾಯ ಹಾಗೂ ಸಹಕಾರ ನೀಡಿದರೆ ಅವರ ಬದುಕು ಉತ್ತಮವಾಗಲಿದೆ. ಈ ದಿಸೆಯಲ್ಲಿ ರೋಗಿಗಳಿಗೆ ಉಪಯುಕ್ತವಾದ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಜಾಗತೀಕರಣದ ಹಿನ್ನೆಲೆಯಲ್ಲಿ ಅವಕಾಶಗಳು ಹೆಚ್ಚಾಗಿ ಒದಗಿಬಂದಿರುವುದರಿಂದ ಸ್ಪರ್ಧೆಗಳು ಹಾಗೂ ಸವಾಲುಗಳು ಸಹ ಹುಟ್ಟಿಕೊಂಡಿವೆ. ಇದನ್ನು ಆತ್ಮಸ್ಥೈರ್ಯದಿಂದ ಎದುರಿಸುವಲ್ಲಿ ಪದವಿಯ ಜತೆಗೆ ಅಗತ್ಯ ಕೌಶಲ ಹೊಂದಿದಾಗ ಗುರಿ ಸಾಧನೆ ಸಾಧ್ಯ ಎಂದು ಹೇಳಿದರು.  ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಹಾಗೂ ಮಾಜಿ ಮೇಯರ್ ಪಿ.ವಿಶ್ವನಾಥ್ ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲ ಡಾ.ಬಿ. ಸದಾಶಿವೇಗೌಡ, ಎನ್‌ಎಸ್ ಮತ್ತು ರೆಡ್‌ಕ್ರಾಸ್ ಸಮನ್ವಯಾಧಿಕಾರಿ ಡಾ.ಎನ್.ಎಸ್. ಲಿಂಗೇಗೌಡ, ಐಎಸ್‌ಟಿಇ ಸಮನ್ವಯಾಧಿಕಾರಿ ಡಾ.ಅನಿತಾ ಸುಧೀರ್ ಹಾಗೂ ಡಾ. ಡಿ.ಜೆ. ರವಿ ಇದ್ದರು. 80 ಮಂದಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ನಂತರ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ಮೈಸೂರಿನ ವಿವಿಧ ಎಂಜಿನಿಯರಿಂಗ್ ಹಾಗೂ ಪದವಿ ಕಾಲೇಜುಗಳು ಭಾಗವಹಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.