ಮೈಸೂರು

'ಹೈ' ಜಡ್ಜ್ ಎಂದು ವಂಚಿಸಿದ್ದವನ ಸೆರೆ!

Published On :

ಮೈಸೂರು: ತಾನು ಹೈಕೋರ್ಟ್ ನ್ಯಾಯಾಧೀಶ ಎಂದು ಹೇಳಿಕೊಂಡು ತಹಸೀಲ್ದಾರ್ ಸೇರಿದಂತೆ ಹಲವರನ್ನು ವಂಚಿಸಿದ್ದ ಆರೋಪಿಯನ್ನು ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮೈಸೂರಿನ ಮಹದೇವಪುರ ನಿವಾಸಿ ಎಂ.ಬಿ. ಶಂಕರ್ (40) ಬಂಧಿತ ಆರೋಪಿ. ತಾನು ಹೈಕೋರ್ಟ್ ನ್ಯಾಯಾಧೀಶ ಎಂದು ಹೇಳಿ ಮೈಸೂರು ತಹಸೀಲ್ದಾರ್ ನವೀನ್ ಜೋಸೆಫ್ ಅವರನ್ನು ವಂಚಿಸಿದ್ದ. ಈ ಬಗ್ಗೆ ಅನುಮಾನಗೊಂಡ ನವೀನ್ ಅವರು ಹೈಕೋರ್ಟ್ ನ್ಯಾಯಾಧೀಶರನ್ನು ನೇರವಾಗಿ ಭೇಟಿಯಾಗಿ, ನಡೆದ ವಿಚಾರ ತಿಳಿಸಿದ್ದರು. ನ್ಯಾಯಾಧೀಶರು ದೂರು ದಾಖಲಿಸುವಂತೆ ಸೂಚಿಸಿದ್ದರು. ಅದರಂತೆ ತಹಸೀಲ್ದಾರ್ ನವೀನ್ ಅವರು ವಿದ್ಯಾರಣ್ಯಪುರಂ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಆರೋಪಿ ಶಂಕರ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈತ ಹಲವರಿಗೆ ಚೆಕ್ ನೀಡಿದ್ದು, ಆ ಚೆಕ್‌ಗಳು ಬೌನ್ಸ್ ಆಗಿರುವುದು ಬೆಳಕಿಗೆ ಬಂದಿದೆ ಎಂದು ಕೆ.ಆರ್. ಉಪ ವಿಭಾಗದ ಎಸಿಪಿ ಎ.ಎನ್. ಪ್ರಕಾಶ್‌ಗೌಡ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.