ಕೆಜೆಪಿಯಿಂದ 'ಯುವಕರ ನಡಿಗೆ ಚುನಾವಣೆ ಕಡೆಗೆ'
ಕ.ಪ್ರ.ವಾರ್ತೆ ಹುಣಸೂರು ಮಾ.30
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಯುವ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಪಕ್ಷದ ಜಯಕ್ಕೆ ಶ್ರಮಿಸಬೇಕು ಎಂದು ಕೆಜೆಪಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮನವಿ ಮಾಡಿದರು. ಇಲ್ಲಿನ ಕೆಜೆಪಿ ಕಚೇರಿಯಲ್ಲಿ ಶನಿವಾರ ನಡೆದ ತಾ. ಯುವ ಘಟಕದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಏ. 7ರಿಂದ ಯುವಕರ ನಡಿಗೆ ಚುನಾವಣೆ ಕಡೆಗೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಪಕ್ಷಕ್ಕೆ ಯುವ ಕಾರ್ಯಕರ್ತರ ಸಕ್ರಿಯ ಭಾಗವಹಿಸುವಿಕೆಯನ್ನು ಕೈಗೊಳ್ಳಲಾಗುವುದು ಎಂದರು. ಹುಣಸೂರು ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ಹಲವಾರು ಆಕಾಂಕ್ಷಿಗಳಾಗಿದ್ದು, ಏ. 3ರೊಳಗೆ ಸೂಕ್ತ ವ್ಯಕ್ತಿಯನ್ನು ಆರಿಸಿ ಕಣಕ್ಕಿಳಿಸಲಾಗುವುದು ಎಂದು ಹೇಳಿದರು. ತಾಲೂಕು ಅಧ್ಯಕ್ಷ ಎಚ್.ಪಿ. ಚಂದ್ರಶೇಖರ್ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಉಮೇಶ್, ನಗರ ಕಾರ್ಯದರ್ಶಿ ಅಶೋಕ್, ಕಾರ್ಯಕಾರಿ ಸಮಿತಿ ಕಾರ್ಯದರ್ಶಿ ಪ್ರಕಾಶ್, ಹರ್ಷ, ತಾ. ಯುವ ಘಟಕದ ಅಧ್ಯಕ್ಷ ಅಜಿತ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

