ಮೈಸೂರು

ಪೊಲೀಸ್ ಠಾಣೆಗಳಲ್ಲಿ ಆಯುಧ ಠೇವಣಿಗೆ ಗಡುವು

Published On :

ಕ.ಪ್ರ.ವಾರ್ತೆ ್ಣ ಮೈಸೂರು ್ಣ ಮಾ.30
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಮೈಸೂರು ನಗರ ಮತ್ತು ಜಿಲ್ಲಾದ್ಯಂತ ಆಯುಧ ರಹದಾರಿ ಹೊಂದಿರುವವರು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ತಮ್ಮ ಶಸ್ತ್ರಾಸ್ತ್ರಗಳನ್ನು ಏ.1ರ ಸಂಜೆ 5 ಒಳಗಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ನಾಗಾನಾಯಕ್ ಸೂಚಿಸಿದ್ದಾರೆ.
ಜಿಲ್ಲಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆಯು ಮೇ 11ರವರೆಗೆ ಜಾರಿಯಲ್ಲಿರುತ್ತದೆ. ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಿರಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಹಿಂದೆ ಆದೇಶ ಹೊರಡಿಸಿದನ್ವಯ, ಮೈಸೂರು ನಗರ ಮತ್ತು ಜಿಲ್ಲಾದ್ಯಂತ ಗುರುವಾರದವರೆಗೆ ಒಟ್ಟು 490 ಆಯುಧಗಳನ್ನು ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಟ್ಟಿರುವ ವರದಿ ಬಂದಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.