ಮೈಸೂರು

ವಿಧಾನಸಭಾ ಚುನಾವಣೆಗೆ ಸಜ್ಜು

Published On :

ಕ.ಪ್ರ.ವಾರ್ತೆ ಹುಣಸೂರು ಮಾ.30
ಮುಂಬರುವ ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಸಲು ತಾಲೂಕು ಆಡಳಿತ ಸನ್ನದ್ಧವಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ವಿನೂತ ಪ್ರಿಯಾ ಹೇಳಿದರು.
ಶಾಂತಿಯುತ ಮತದಾನ ನಡೆಯಲು ಬೇಕಾದ ಎಲ್ಲ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳು, ಚುನಾವಣಾ ಸಿಬ್ಬಂದಿ ಹಾಗೂ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾಹಿತಿ ನೀಡಲಾಗಿದೆ ಎಂದು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 262,1(ಹೆಚ್ಚುವರಿ) ಮತದಾನ ಕೇಂದ್ರ ಸ್ಥಾಪಿಸಲಾಗುವುದು. ಇವುಗಳಲ್ಲಿ 95 ಅತಿಸೂಕ್ಷ್ಮ, 85 ಸೂಕ್ಷ್ಮ ಹಾಗೂ 85 ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ. ತಾಲೂಕಿನಲ್ಲಿ ಒಟ್ಟು 2,01,657 ಮತದಾರರಿದ್ದು, ಇವರಲ್ಲಿ ಪುರುಷರು 1,02,884 ಹಾಗೂ ಮಹಿಳೆಯರು 98,773.
ಮತದಾರರ ಗುರುತಿನ ಚೀಟಿಯಲ್ಲಿ ದೋಷ ಸರಿಪಡಿಸಲು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಇನ್ನಿತರೆ ಕ್ರಮಗಳಿಗೆ ಏ. 7ರವರೆಗೆ ಕಾಲಾವಕಾಶವಿದ್ದು, ಮತದಾರರು ಖುದ್ದಾಗಿ ಕಚೇರಿಗೆ ಆಗಮಿಸಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ.
ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು ಸಲ್ಲಿಸಲು 24್ಢ7 ಕಂಟ್ರೋಲ್ ರೂಂ ತೆರೆಯಲಾಗಿದ್ದು, 08222-252040 ಸಂಖ್ಯೆಗೆ ದೂರು ಸಲ್ಲಿಸಬಹುದು. ತಾಲೂಕಿನಲ್ಲಿ ಮನುಗನಹಳ್ಳಿ, ಕಲ್‌ಬೆಟ್ಟ ಹಾಗೂ ವೀರನಹೊಸಳ್ಳಿಯಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಲಾಗುವುದು ಹಾಗೂ ಇಲ್ಲಿ ಎಲ್ಲ ವಾಹನಗಳನ್ನೂ ತಪಾಸಣೆಗೊಳಪಡಿಸಲಾಗುವುದು. ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರಕ್ಕಾಗಿ ಬಳಸುವ ಕುರ್ಚಿಗಳು, ಮೈಕ್, ವಾಹನಗಳ ಸಮರ್ಪಕ ಮಾಹಿತಿ ಹಾಗೂ ಅನುಮತಿಯನ್ನು ಆಯಾ ಚುನಾವಣಾಧಿಕಾರಿಯಿಂದ ಕಡ್ಡಾಯವಾಗಿ ಪಡೆಯಬೇಕೆಂದು ಹೇಳಿದರು. ತಹಸೀಲ್ದಾರ್ ಬಿ.ಸಿ. ಶಿವಾನಂದಮೂರ್ತಿ, ನೋಡಲ್ ಅಧಿಕಾರಿ ಮಂಜುನಾಥ್ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.