ಕೈ ಕಾರ್ಯಕರ್ತರ ಸಂಭ್ರಮಾಚರಣೆ
ಕ.ಪ್ರ.ವಾರ್ತೆ ಟಿ.ನರಸೀಪುರ ಮೇ 10
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಹೈಕಮಾಂಡ್ ಶಾಸಕಾಂಗ ಸಭೆಯಲ್ಲಿ ಘೋಷಣೆ ಮಾಡುತ್ತಿದ್ದಂತೆಯೆ, ಕೆ.ಆರ್. ನಗರ ಪುರಸಭಾ ಮತ್ತು ಗರುಡಗಂಭದ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮ ಆಚರಿಸಿದರು.
ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಪರ ಜೈಕಾರ ಕೂಗಿದರಲ್ಲದೆ, ನಿಷ್ಠುರ ನಡೆಗೆ ಹೆಸರಾಗಿರುವ ಜನನಾಯಕ ಮುಖ್ಯಮಂತ್ರಿಯಾಗುತ್ತಿರುವುದು ಸಂತಸದ ವಿಚಾರ ಎಂದು ಕುಣಿದು ಕುಪ್ಪಳಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ನೂರಾರು ಕಾರ್ಯಕರ್ತರು ದಶಕಗಳ ನಂತರ ಮೈಸೂರು ಜಿಲ್ಲೆಗೆ ಮುಖ್ಯಮಂತ್ರಿ ಪಟ್ಟ ದಕ್ಕಿರುವುದಕ್ಕೆ ಅಪಾರ ಸಂತಸ ವ್ಯಕ್ತಪಡಿಸಿದರು. ತಾಲೂಕು ಕುರುಬರ ಸಂಘದ ಅಧ್ಯಕ್ಷ ಜಿ.ಎನ್. ಮಲ್ಲೇಗೌಡ, ಪುರಸಭಾ ಸದಸ್ಯ ರಿಜ್ವಾನ್ ಉಲ್ಲಾಖಾನ್, ಪುರಸಭಾ ಆಶ್ರಯ ಸಮಿತಿ ಮಾಜಿ ಸದಸ್ಯ ನಟರಾಜ, ಮಧುವನಹಳ್ಳಿ ನಾಗರಾಜ್, ಜಿಪಂ ಮಾಜಿ ಸದಸ್ಯ ಜಿ.ಆರ್. ರಾಮೇಗೌಡ, ತಾಪಂ ಮಾಜಿ ಸದಸ್ಯ ಮಂಚನಹಳ್ಳಿ ಮಲ್ಲಿಕಾರ್ಜುನ, ಕೆ.ಆರ್. ನಗರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಜಿ.ಎಂ. ಹೇಮಂತ್, ಅರುಣ್ಕುಮಾರ್, ಕೆಂಪರಾಜು, ಅನಂತ, ಕಾಂಗ್ರೆಸ್ ಮುಖಂಡರಾದ ಚೀರ್ನಹಳ್ಳಿ ಶಿವಣ್ಣ, ದಿಡ್ಡಹಳ್ಳಿ ಬಸವರಾಜು, ರಾಜೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

