ಮೈಸೂರು

ಸೋಲಿಗೆ ಯಾರನ್ನೂ ದೂಷಿಸಲ್ಲ'

Published On :

ಎಚ್.ಡಿ. ಕೋಟೆ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಬೇರೆ ಯಾರನ್ನೂ ದೂಷಿಸುವುದಿಲ್ಲ. ಅದಕ್ಕೆ ನಾನೇ ಕಾರಣ ಮತ್ತು ಸೋಲನ್ನು ಒಪ್ಪಿಕೊಳ್ಳುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಸಿದ್ದರಾಜು ಹೇಳಿದರು.
ಬಿಎಸ್ಪಿ ಮತ್ತು ಕೆಜೆಪಿ ಪಕ್ಷದ ಅಭ್ಯರ್ಥಿಗಳು ಬಿಜೆಪಿ ಮತವನ್ನು ಸೆಳೆದಿದ್ದರಿಂದ ನಾನು ಸೋಲಬೇಕಾಯಿತು. ಚುನಾವಣೆ ನಡೆದ ದಿನವೇ ಇದು ನನ್ನ ಅರಿವಿಗೆ ಬಂತು. ಆದರೂ ಒಂದು ಸಾವಿರ ಮತಗಳ ಅಂತರದಿಂದ ಗೆಲುವು ಕಾಣುತ್ತೇನೆ ಎನ್ನುವ ಆಶಾಭಾವನೆ ಇತ್ತು. ಆದರೆ ನಿರೀಕ್ಷೆ ಸುಳ್ಳಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿ ವಿರುದ್ಧ ಅಲೆ ಇದ್ದರೂ, ಘಟಾನುಘಟಿ ನಾಯಕರು ಸೋತಿರುವ ಸಂದರ್ಭದಲ್ಲಿ ತಾಲೂಕಿನ ಜನತೆ 31 ಸಾವಿರಕ್ಕೂ ಹೆಚ್ಚು ಮತಗಳನ್ನು ಕೊಟ್ಟಿದ್ದಾರೆ. ಆದ್ದರಿಂದ ತಾಲೂಕಿನ ಮತದಾರರಿಗೆ, ಇಷ್ಟೊಂದು ಮತ ಬರಲು ಕಾರಣರಾದ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದರು.
ಸೋತಿದ್ದೇನೆ ಎಂದು ತಾಲೂಕನ್ನು ಬಿಟ್ಟು ಹೋಗುವುದಿಲ್ಲ. ಕಾರ್ಯಕರ್ತರಿಗೆ ಬೆಂಬಲವಾಗಿ ನಿಲ್ಲಬೇಕಾಗಿದೆ. ವಿಧಾನಪರಿಷತ್ ಸದಸ್ಯತ್ವ ಅವಧಿ ಇನ್ನೂ ಒಂದೂವರೆ ವರ್ಷ ಬಾಕಿ ಇದೆ.
 ಆ ಅವಧಿಯಲ್ಲಿ ತಾಲೂಕಿನ ಅಭಿವೃದ್ಧಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ, ಶ್ರಮ ವಹಿಸುವ ಮುಖಾಂತರ ಪ್ರಾಮಾಣಿಕ ಪ್ರಯತ್ನ ಪಡುತ್ತೇನೆ. ಎಲ್ಲೂ ದ್ವೇಷದ ರಾಜಕಾರಣ ಮಾಡುವುದಿಲ್ಲ. ತಾಲೂಕಿನ ಅಭಿವೃದ್ಧಿಗೆ ನೂರಾರು ಕನಸು ಕಂಡಿದ್ದೆ. ಮುಂದಿನ ದಿನಗಳಲ್ಲಿ ಅದನ್ನು ನನಸು ಮಾಡುವ ನಿಟ್ಟಿನಲ್ಲಿ ತಾಲೂಕಿನಲ್ಲಿದ್ದು ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.