ಮೈಸೂರು

ಸಿದ್ದರಾಮಯ್ಯಗೆ ಸ್ವಾಗತ

Published On :

ಮೈಸೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿರುವುದಕ್ಕೆ ಇಲ್ಲಿನ ಕರ್ನಾಟಕ ವಿಕಾಸ ವಾಹಿನಿ ಸ್ವಾಗತಿಸಿದೆ.
ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ಅವರು ಜನಮುಖಿ ನಾಯಕರಾಗಿದ್ದು, ಕಾಂಗ್ರೆಸ್‌ನ ವರಿಷ್ಠರು ಹಾಗೂ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವುದರಿಂದ ರಾಜ್ಯವು ಹತ್ತು ಹಲವು ದಿಕ್ಕಿನಲ್ಲಿ ಪ್ರಗತಿ ಕಾಣಲು ಸಾಧ್ಯವಾಗಲಿದೆ ಎಂದು ವಾಹಿನಿಯ ರಾಜ್ಯ ಸಂಚಾಲಕ ಎಸ್. ಶ್ರೀಕಾಂತ್, ನಗರ ಸಂಚಾಲಕ ಮರಡೇಶಮೂರ್ತಿ, ಜಿಲ್ಲಾ ಸಂಚಾಲಕ ಪ್ರಸನ್ನ, ಎಸ್.ಕೆ. ಮಹದೇವ, ಸೋಮಯ್ಯ ಮಲಿಯೂರು ತಿಳಿಸಿದ್ದಾರೆ.
ಮೈಸೂರು ವಾಣಿಜ್ಯ, ಕೈಗಾರಿಕಾ ಸಂಸ್ಥೆ ಸ್ವಾಗತ: ಡಿ. ದೇವರಾಜ ಅರಸ್ ಅವರ ನಂತರ ಜಿಲ್ಲೆಗೆ ಮುಖ್ಯಮಂತ್ರಿ ಸ್ಥಾನ ಲಭಿಸಿರುವುದನ್ನು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸ್ವಾಗತಿಸಿದೆ.
ಮೈಸೂರು ರಾಜ್ಯದ 2ನೇ ನಗರವಾಗಿದ್ದರೂ ಆರ್ಥಿಕ, ಸಾಮಾಜಿಕ ಹಾಗೂ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಈಗ ಜಿಲ್ಲೆ ಮತ್ತು ರಾಜ್ಯದ ಸಂಪೂರ್ಣ ಅರಿವಿರುವ ಹಾಗೂ ಸಾಮಾಜಿಕ ಕಳಕಳಿ ಹೊಂದಿರುವ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಅಲಂಕರಿಸುವುದಕ್ಕೆ ಸಂಸ್ಥೆಯ ಅಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.