ಮೈಸೂರು

ದಲಿತ ಸಂಘಟನೆಗಳಿಂದ ಪ್ರತಿಭಟನೆ

Published On :

ಕ.ಪ್ರ.ವಾರ್ತೆ   ಪಿರಿಯಾಪಟ್ಟಣ   ಮೇ 13
ದಲಿತರಿಗೆ ರಾಜ್ಯದ ಮುಖ್ಯಮಂತ್ರಿ ಹುದ್ದೆ ನೀಡದೆ ಅನ್ಯಾಯ ಮಾಡಿರುವ ಕಾಂಗ್ರೆಸ್ ಪಕ್ಷದ ದಲಿತ ವಿರೋಧಿ ನೀತಿ ವಿರುದ್ಧ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಪಟ್ಟಣದಲ್ಲಿ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಿದರು.
ಇಲ್ಲಿನ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿ ಮುಂಭಾಗದಿಂದ ಮೆರವಣಿಗೆ ಹೊರಟ ದಲಿತ ಸಂಘಟನೆಗಳ ಕಾರ್ಯಕರ್ತರು, ಬೆಟ್ಟದಪುರ ಸರ್ಕಲ್‌ನಲ್ಲಿ ಕೆಲಕಾಲ ರಾಜ್ಯ ಹೆದ್ದಾರಿ ಬಂದ್ ಮಾಡಿ, ನಂತರ ತಾ. ಕಚೇರಿಗೆ ತೆರಳಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಸಂಸ ಜಿಲ್ಲಾ ಸಂಚಾಲಕ ಸಿ.ಎಚ್. ಜಗದೀಶ್ ಮಾತನಾಡಿದರು. ಮಂಜುನಾಥ್, ಮಹದೇವ್, ಸೋಮಶೇಖರ್, ಸಣ್ಣಪ್ಪ, ಸ್ವಾಮಿ, ಚೆಲುವಯ್ಯ, ನಾಗರಾಜು, ರಾಜಯ್ಯ, ದೇವರಾಜ್, ದೇವಯ್ಯ, ಶೋಭಾ, ಮಾಜಿ ಪೊಲೀಸ್ ಅಧಿಕಾರಿ ಅಣ್ಣಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.