ಚರಂಡಿ ಕಾಮಗಾರಿ ಅವೈಜ್ಞಾನಿಕ: ಆರೋಪ
ಕ.ಪ್ರ.ವಾರ್ತೆ ಕೆ.ಆರ್. ನಗರ ಮೇ 16
ಇಲ್ಲಿನ ಚಂದ್ರಮೌಳೇಶ್ವರ ರಸ್ತೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಗಳ ಮುಂದೆ ನಿರ್ಮಿಸುತ್ತಿರುವ ಬಾಕ್ಸ್ ಕಾಂಕ್ರಿಟ್ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿದೆ ಎಂದು ಸಾರ್ವಜನಿಕರ ದೂರಿನ ಹಿನ್ನೆಲೆ ಗುರುವಾರ ಸಂಜೆ ಶಾಸಕ ಸಾ.ರಾ. ಮಹೇಶ್ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಪುರಸಭಾ ಮುಖ್ಯಾಧಿಕಾರಿ ನಾಗಶೆಟ್ಟಿ ಮತ್ತು ಕಿರಿಯ ಎಂಜಿನಿಯರ್ ಲೋಕೇಶ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಶಾಸಕರು, ರಸ್ತೆಗಿಂತ ಎತ್ತರವಾಗಿ ಚರಂಡಿ ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆ ನೀಡುವುದರ ಜತೆಗೆ ವಾಣಿಜ್ಯ ಮಳಿಗೆ ವ್ಯಾಪಾರಿಗಳಿಗೂ ಅನಾನುಕೂಲ ಕಲ್ಪಿಸುತ್ತಿರುವ ಬಗ್ಗೆ ಕಿಡಿಕಾರಿದರು.
ಸರ್ಕಾರದ ಹಣ ಬಳಸಿಕೊಂಡು ಕಾಮಗಾರಿ ನಿರ್ವಹಿಸುವಾಗ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಮತ್ತು ವಾಣಿಜ್ಯ ಮಳಿಗೆಗಳ ವ್ಯಾಪಾರಿಗಳ ಸಲಹೆ ಪಡೆದು ಎಲ್ಲರಿಗೂ ಅನುಕೂಲವಾಗುವಂತೆ ಕಾಮಗಾರಿ ನಿರ್ವಹಿಸಬೇಕು. ನಿಮಗಿಷ್ಟ ಬಂದಂತೆ ಕೆಲಸ ಮಾಡಲು ಸಾಧ್ಯವಿಲ್ಲ. ಕೂಡಲೇ ಕಾಮಗಾರಿ ಸ್ಥಗಿತಗೊಳಿಸಿ ರಸ್ತೆ ಮಟ್ಟಕ್ಕೆ ಚರಂಡಿ ನಿರ್ಮಾಣ ಮಾಡಬೇಕೆಂದು ಆದೇಶಿಸಿದರು.
ಈ ಬಗ್ಗೆ ತಮಗೆ ಪೂರ್ಣ ವರದಿ ನೀಡಿ ವಾಣಿಜ್ಯ ಮಳಿಗೆಗಳ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಜತೆಗೆ ರಸ್ತೆಯ ನೀರು ಸರಾಗವಾಗಿ ಚರಂಡಿಗೆ ಹರಿಯುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್, ನಗರಾಧ್ಯಕ್ಷ ಡಿ.ಸಿ. ಮಂಜುನಾಥ್, ಪುರಸಭಾ ಸದಸ್ಯರಾದ ಸುಬ್ರಹ್ಮಣ್ಯ, ಕೆ.ಎಲ್. ಜಗದೀಶ್, ತಾಪಂ ಸದಸ್ಯ ಹಾಡ್ಯ ಮಹದೇವಸ್ವಾಮಿ, ಸಾ.ರಾ. ಸ್ನೇಹ ಬಳಗದ ಕಾರ್ಯದರ್ಶಿ ಸಿ.ಜೆ. ಆನಂದ, ವಕ್ತಾರ ಕೆ.ಎಲ್. ರಮೇಶ್, ಮುಖಂಡರಾದ ಹೊಸಹಳ್ಳಿ ಪುಟ್ಟರಾಜು, ಮಿರ್ಲೆ ಧನಂಜಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

