ಸಚಿವರಾಗದವರು ಕಳಂಕಿತರೆ?
ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಮೇ 19
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದವರು ಕಳಂಕಿತರಿಗೆ ಸಚಿವ ಸ್ಥಾನ ನೀಡಿಲ್ಲ ಎಂಬುದಾಗಿ ಬಿಂಬಿಸಲು ಹೊರಟಿದ್ದಾರೆ. ಅಂದರೆ ಉಳಿದಿರುವ ಶಾಸಕರು ಕಳಂಕಿತರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
ತಾಲೂಕಿನ ಆವರ್ತಿ ಗ್ರಾಮದಲ್ಲಿ ಪಿರಿಯಾಪಟ್ಟಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಮಹದೇವ್ ಪರ ಭಾನುವಾರ ರೋಡ್ ಶೋ ಮೂಲಕ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರಿಗೆ ಅಗತ್ಯವಾಗಿ ಬೇಕಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಚಿಂತಿಸದೆ ಮದ್ಯದ ದೊರೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಗ್ಗದ ಮದ್ಯವನ್ನು ಸರಬರಾಜು ಮಾಡಲು ಹೊರಟಿರುವುದು ಎಷ್ಟರಮಟ್ಟಿಗೆ ಸರಿ ಎಂದರು.
ಇನ್ನು ಕೆ. ವೆಂಕಟೇಶ್ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಷ್ಟು ಕಮೀಷನ್ ಪಡೆಯುತ್ತಿದ್ದರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಜೆಡಿಎಸ್ ಪಕ್ಷ ಸಮರ್ಥ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲು ಪಕ್ಷದ ಅಭ್ಯರ್ಥಿ ಕೆ. ಮಹದೇವ್ ಅವರನ್ನು ಗೆಲ್ಲಿಸುವಂತೆ ಅವರು ಮನವಿ ಮಾಡಿದರು.
ಅಭ್ಯರ್ಥಿ ಕೆ. ಮಹದೇವ್ ಮಾತನಾಡಿ, ತಾಲೂಕಿನಲ್ಲಿ ಹಲವಾರು ಬಾರಿ ಶಾಸಕರಾಗಿ ಒಂದು ಬಾರಿ ಮಂತ್ರಿಯಾಗಿ ಕಾರ್ಯನಿರ್ವಹಿಸಿರುವ ಕೆ.ವೆಂಕಟೇಶ್ ಅವರು ಮಾಡಿರುವ ಸಾಧನೆಗಳೇನು ಎಂಬುದು ಜನತೆಗೆ ತಿಳಿದಿದ್ದು ಚುನಾವಣಾ ಪೂರ್ವದಲ್ಲಿ ಮಾತ್ರ ಗುದ್ದಲಿ ಹಾರೆ ಹಿಡಿದು ತಿರುಗಿದ ಕೆ. ವೆಂಕಟೇಶ್ ಅವರಿಗೆ ಮತದಾರರು ಈ ಬಾರಿಯ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಛೇಡಿಸಿದರು.
ಬಿರುಗಾಳಿ ಮಳೆ: ಮನೆಗಳಿಗೆ ಹಾನಿ
ಕ.ಪ್ರ.ವಾರ್ತೆ ಹುಣಸೂರು ಮೇ 19
ಬಿರುಗಾಳಿ ಮಳೆಗೆ ಮನೆಯ ಮುಂದಿದ್ದ ತೆಂಗಿನ ಮರವೊಂದು ಮನೆಯ ಮೇಲೆ ಬಿದ್ದು ಮನೆ ಸಂಪೂರ್ಣ ಹಾನಿಗೀಡಾಗಿರುವ ಘಟನೆ ಹನಗೋಡು ಹೋಬಳಿಯ ಹಿಂಡಗುಡ್ಲು ಗ್ರಾಮದಲ್ಲಿ ನಡೆದಿದೆ.
ಶನಿವಾರ ಮಧ್ಯರಾತ್ರಿ ಬಿದ್ದ ಬಿರುಗಾಳಿ ಸಹಿತ ಮಳೆಗೆ ಹಿಂಡಗುಡ್ಲು ಗ್ರಾಮದ ದಲಿತ ಕಾಲೋನಿಯ ಲೇಟ್ ಸೋಮಯ್ಯನವರ ಪತ್ನಿ ಅಶ್ವತಮ್ಮ ಅವರಿಗೆ ಸೇರಿದ ಹಂಚಿನ ಮನೆಯ ಮೇಲೆ ತೆಂಗಿನ ಮರ ಬುಡ ಸಮೇತ ಬಿದ್ದು ಮನೆಯು ಸಂಪೂರ್ಣ ಹಾನಿಯಾಗಿದೆ. ಮನೆಯೊಳಗಿದ್ದ ಟಿವಿ, ಡಿಟಿಎಚ್ ಡಿಸ್, ಪಾತ್ರೆಗಳು ಸೇರಿದಂತೆ ಇತರೆ ವಸ್ತುಗಳು ಜಖಂಗೊಂಡು ಸುಮಾರು 1 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ಸ್ಥಳಕ್ಕೆ ದೊಡ್ಡಹೆಜ್ಜೂರು ಗ್ರಾಪಂ ಪಿಡಿಒ ದೊಡ್ಡಮಾದಯ್ಯ, ಗ್ರಾಮಲೆಕ್ಕಿಗ ಶಿವಪ್ಪ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

