ನೊಂದವರಿಗೆ ನೆರವಾಗಿ
ಕೆ.ಆರ್. ನಗರ: ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಇರುವುದರಿಂದ ಸಮಾಜದ ಸ್ವಾಸ್ಥ್ಯ ಉತ್ತಮವಾಗಿದ್ದು, ಪತ್ರಕರ್ತರು ನೊಂದವರ ತುಳಿಕ್ಕೊಳಗಾದವರ ನೆರವಿಗೆ ಬರಬೇಕೆಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಪಟ್ಟಣದ ಐಎಂಎ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಪತ್ರಿಕಾ ದಿನಾಚರಣೆ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕು ಪತ್ರಕರ್ತರ ಸಂಘ ದಶಕಗಳಿಂದ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದು, ಸಂಘದ ಎಲ್ಲ ಸದಸ್ಯರು ತಾಲೂಕಿನ ಅಭಿವೃದ್ಧಿಗೆ ಚುನಾಯಿತ ಜನಪ್ರತಿನಿಧಿಗಳ ಜತೆಗೆ ಸ್ಪಂದಿಸಿ ಸಲಹೆ-ಸೂಚನೆಗಳನ್ನು ನೀಡುತ್ತಾ ಬಂದಿದ್ದು, ಇದು ಉತ್ತಮ ಬೆಳವಣಿಗೆ ಎಂದರು.
ಪತ್ರಿಕೆಗಳು ಜನಪ್ರತಿನಿಧಿಗಳನ್ನು ಎಚ್ಚರಿಸುವ ಕೆಲಸ ಮಾಡಬೇಕು. ಆಗ ಅಭಿವೃದ್ಧಿ ಕೆಲಸ ಮಾಡಲು ಸಹಕಾರಿಯಾಗುತ್ತದೆ. ನಾವುಗಳು ಮಾಡುವ ಉತ್ತಮ ಕೆಲಸಗಳನ್ನು ಜನರಿಗೆ ಮನವರಿಕೆ ಮಾಡಿದಾಗ ಮತ್ತಷ್ಟು ಸಾಧನೆ ಮಾಡಲು ಸ್ಪೂರ್ತಿ ಸಿಗುತ್ತದೆ ಎಂದು ಹೇಳಿದರು.
ತಮ್ಮ ಅನುದಾನದಿಂದ ಮೂರು ಲಕ್ಷ ರು. ಮತ್ತು ಸಂಸದ ಪುಟ್ಟರಾಜು ಅವರ ನಿಧಿಯಿಂದ 2 ಲಕ್ಷ ರು. ಅನುದಾನವನ್ನು ಭವನದ ನಿರ್ಮಾಣ ಕಾಮಗಾರಿಗೆ ಕೊಡಿಸುವುದಾಗಿ ಭರವಸೆ ನೀಡಿದ ಶಾಸಕರು, ಪತ್ರಕರ್ತರ ಭವನ ನಿರ್ಮಾಣಗೊಂಡ ನಂತರ ಪತ್ರಿಕಾ ಕಾರ್ಯಗಳ ಜತೆಗೆ ಸಾರ್ವಜನಿಕ ಸೇವೆಗೂ ಮುಕ್ತವಾಗಿ ತೆರೆದು, ಭವನದಲ್ಲಿ ವಾಚನಾಲಯ ಆರಂಭಿಸಿ ವಿದ್ಯಾರ್ಥಿಗಳ ಜ್ಞಾನ ದಾಹ ತಣಿಸುವಂತಾಗಬೇಕೆಂದು ತಿಳಿಸಿದರು.
ತಾಲೂಕು ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ ಮಾತನಾಡಿ, ಉತ್ತಮ ಕೆಲಸ ಮಾಡುತ್ತಿರುವ ಸಂಘದ ಅಭಿವೃದ್ಧಿಗೆ ತಾನು ಸದಾ ಸಹಕಾರ ನೀಡುತ್ತೇನೆ ಎಂದು ಹೇಳಿದರು. ತಾಪಂ ಅಧ್ಯಕ್ಷ ಹಾಡ್ಯ ಮಹದೇವಸ್ವಾಮಿ ಮಾತನಾಡಿದರು. ಸಂಘದ ಅಧ್ಯಕ್ಷ ಕುಪ್ಪೆ ಮಹದೇವಸ್ವಾಮಿ ಅಧ್ಯಕ್ಷತೆ ವಹಿಸಿದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಪತ್ರಕರ್ತರಾದ ಕೆ.ಟಿ. ಮಂಜುನಾಥ್, ಎಸ್.ಬಿ. ಹರೀಶ್ ಅವರನ್ನು ಅಭಿನಂದಿಸಲಾಯಿತು. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕುಪ್ಪೆ ಮಹದೇವಸ್ವಾಮಿ, ಉಪಾಧ್ಯಕ್ಷ ಡಿ.ಜೆ.ವಿನಯ್, ಪ್ರಧಾನ ಕಾರ್ಯದರ್ಶಿ ನಾಗೇಶ್, ಪುರಸಭಾ ಅಧ್ಯಕ್ಷೆ ಪಾರ್ವತಿ ನಾಗರಾಜು, ಉಪಾಧ್ಯಕ್ಷೆ ಲಕ್ಷ್ಮಿ ಕನಕರಾಜು, ಸದಸ್ಯರಾದ ನಾಗಣ್ಣ, ಹೇಮಾವತಿ, ಸಣ್ಣಪ್ಪ, ಪುರಸಭಾ ಸದಸ್ಯರಾದ ಕೆ.ಎಲ್. ಜಗದೀಶ್, ಕೆ.ಜಿ.ಸುಬ್ರಮಣ್ಯ, ನಂಜುಂಡ, ತಾಲೂಕು ಕಸಾಪ ಅಧ್ಯಕ್ಷ ಜಿ.ಕೆ.ರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಸಿದ್ದೇಗೌಡ, ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ. ಸೋಮಶೇಖರ್, ಎಪಿಎಂಸಿ ಉಪಾಧ್ಯಕ್ಷ ತೋಟಪ್ಪನಾಯಕ, ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್, ತಹಸೀಲ್ದಾರ್ ಆರ್.ಬಿ. ಶಿವಶಂಕರಪ್ಪ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಂಗಸ್ವಾಮಿ, ಸತೀಶ್, ರೋಟರಿ ಅಧ್ಯಕ್ಷ ಡಾ. ಅಮರನಾಥ್, ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್. ರಮೇಶ್, ಜಿಪಂ ಮಾಜಿ ಸದಸ್ಯ ಜಿ.ಆರ್. ರಾಮೇಗೌಡ, ತಾಲೂಕು ಯುವ ಜೆಡಿಎಸ್ ಮುಖಂಡ ಬೆಣಗನಹಳ್ಳಿ ಕೃಷ್ಣೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

