ಎದೆ ಹಾಲಿನಲ್ಲಿ ರೋಗ ನಿರೋಧಕ ಶಕ್ತಿ
ಪಿರಿಯಾಪಟ್ಟಣ: ತಾಯಿಯ ಎದೆ ಹಾಲಿನಲ್ಲಿ ರೋಗ ನಿರೋಧಕ ಶಕ್ತಿ ಇದ್ದು, ಮಗು ಹುಟ್ಟಿದ 30 ನಿಮಿಷದೊಳಗೆ ತಾಯಿ ಮಗುವಿಗೆ ಎದೆಹಾಲು ಕುಡಿಸಬೇಕು ಎಂದು ಕಂಪಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಎಸ್.ಕೆ. ರವಿಕುಮಾರ್ ಹೇಳಿದರು.
ತಾಲೂಕಿನ ಕಂಪಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಗುವಿಗೆ ಹಾಲುಣಿಸುವುದರಿಂದ ತಾಯಿಯ ಸೌಂದರ್ಯ ಕಡಿಮೆಯಾಗುತ್ತದೆ ಎಂಬ ತಪ್ಪು ಕಲ್ಪನೆಯಿಂದ ಕೆಲವು ತಾಯಂದಿರು ಹಾಲುಣಿಸುವುದನ್ನು ಕಡಿಮೆ ಮಾಡುತ್ತಾರೆ.
ಇದರಿಂದ ಮಗುವಿನ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಮೂಲಕ ಮಗು ರೋಗಗಳಿಗೆ ತುತ್ತಾಗುವ ಸಂಭವವಿದೆ. ತಾಯಿ ಮಗುವಿಗೆ ಹಾಲುಣಿಸುವುದರಿಂದ ಸೌಂದರ್ಯ ಹೆಚ್ಚುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ ಎಂದು ತಿಳಿಸಿದರು.
ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಎಂ.ಎನ್.ನಾಗವೇಣಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೆಲ ಗರ್ಭಿಣಿಯರು, ಬಾಣಂತಿಯರು ಹೆಚ್ಚಾಗಿ ಧಾರಾವಾಹಿಗಳನ್ನು ನೋಡುತ್ತಾ, ಮಕ್ಕಳ ಬಗ್ಗೆ ಆಸಕ್ತಿ ತೋರುತ್ತಿಲ್ಲ.
ಈ ರೀತಿಯಿಂದ ಗರ್ಭದಲ್ಲಿರುವ ಮಗು ಹಾಗೂ ಹುಟ್ಟಿದ ಮಗುವಿನ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಹೇಳಿದರು. ಗ್ರಾಪಂ ಅಧ್ಯಕ್ಷೆ ಪುಷ್ಪಾ ಪರಮೇಶ್, ಆರೋಗ್ಯ ಸಹಾಯಕರಾದಶ್ರೀನಾಥ್, ಪಿ.ಸಿ.ಭವಾನಿ, ರೋಹಿಣಿ, ಕಾಂತಮ್ಮ, ಗೀತಾ, ಚಿನ್ನಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

