ಮೈಸೂರು

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಹಗರಣ

Published On :

ಮೈಸೂರು: ಕಳೆದ ಸಾಲಿನಲ್ಲಿ ಕೆಪಿಎಸ್‌ಸಿಗೆ ಆಯ್ಕೆಯಾಗಿರುವ ಅಹಿಂದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ತಡೆಯಲಿ ಎಂದು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್ ಹೇಳಿದರು.
ಕಾಯಕಯೋಗಿ ವೇದಿಕೆಯಿಂದ ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೆ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಯುವಶಕ್ತಿ ಹಾಗೂ ಸಾಮಾಜಿಕ ಹೊಣೆ ಒಂದು ಚಿಂತನೆ ಎಂಬ ಕಾರ್ಯಕ್ರಮ ಉದ್ಘಾಟಿಸಿದ ಅವರು, ಅಹಿಂದದ ಅನುಷ್ಠಾನ ಹಾಗೂ ಸಾಮಾಜಿಕ ಹೊಣೆ ಕುರಿತು ಮಾತನಾಡಿದರು.
ಕರ್ನಾಟಕ ಲೋಕಸೇವಾ ಆಯೋಗವು ಕಳೆದ ಸಾಲಿನಲ್ಲಿ ಎ ಮತ್ತು ಬಿ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ 1038 ವಿದ್ಯಾರ್ಥಿಗಳು ಸಂದರ್ಶನಕ್ಕೆ ಆಯ್ಕೆಯಾಗಿದ್ದರು. ಆದರೆ ಆಯ್ಕೆ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಆಯ್ಕೆಗೊಂಡಿರುವ 362 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶ ಮಾಡುತ್ತಿರುವುದು ಸಮಂಜಸವಲ್ಲ ಎಂದರು. ಜಾತಿವಾರು ಸಮೀಕ್ಷೆಯನ್ನು ನಡೆಸಿ 60-70 ವರ್ಷಗಳೇ ಕಳೆದರೂ ಇದುವರೆಗೂ ನಡೆಸಿಲ ಎಂದರು. ಚಾಲುಕ್ಯ ಪ್ರಶಸ್ತಿ ಪುರಸ್ಕೃತ ಅರುಣ್‌ಕುಮಾರ್ ಖನ್ನೂರು, ಕೆಎಎಸ್ ಅಧಿಕಾರಿ ಸಿ.ನಾಗರಾಜು ಹಾಗೂ ಯುವ ಮುಖಂಡ ಎಂ. ನಿಕೇತ್‌ರಾಜ್ ಮುಖ್ಯ ಅತಿಥಿಗಳಾಗಿದ್ದರು. ಎಂ.ಅರುಣ್ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.