ಇಂದು ಶೈಕ್ಷಣಿಕಕಾರ್ಯಾಗಾರ
ರಾಯಚೂರು: ನಗರದ ಎಸ್ಕೆಇ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಫೆ.2ರಂದು ನಗರದಲ್ಲಿ ಶೈಕ್ಷಣಿಕ ವಿಚಾರ ಸಂಕಿರಣ ಆಯೋಜಿಸಲಾಗಿದೆ.ನಗರದ ಕುಬೇರಾ ಹೊಟೇಲ್ ಸಭಾಂಗಣದಲ್ಲಿ ಅಂದು ಸಂಜೆ 6ಕ್ಕೆ ವಿಚಾರ ಸಂಕಿರಣವನ್ನು ಕೃಷಿ ವಿವಿ ಕುಲಸಚಿವ ಡಾ. ಡಿ.ಪಿ. ಬಿರಾದಾರ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಸ್ಎಲ್ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಬಿ. ಚೆಟ್ಟಿ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಸಂಸ್ಥೆ ಗೌರವಾಧ್ಯಕ್ಷ ಬಸವರಾಜ ಕಳಸ ವಹಿಸುವರು. ವಿಶೇಷ ಆಹ್ವಾನಿತರಾಗಿ ಜನಸಂಗ್ರಾಮ ಪರಿಷತ್ನ ಪ್ರಮುಖ ರಾಘವೇಂದ್ರ ಕುಷ್ಟಗಿ ಮತ್ತು ರಜಾಕ್ ಉಸ್ತಾದ್, ಜೆಡಿಎಸ್ ಮುಖಂಡ ಡಾ.ಶಿವರಾಜ್ ಪಾಟೀಲ್, ಉದ್ಯಮಿ ಈ.ಆಂಜನೇಯ ಪಾಲ್ಗೊಳ್ಳಲಿದ್ದಾರೆ. ವಿಚಾರ ಸಂಕಿರಣದಲ್ಲಿ 371ನೇ ಕಲಂ(ಜೆ) ತಿದ್ದುಪಡಿ ಜಾರಿಯಾಗುತ್ತಿರುವ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ, ವೈದ್ಯಕೀಯ, ತಾಂತ್ರಿಕ ಮತ್ತಿತರ ಕ್ಷೇತ್ರಗಳಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಆಯ್ಕೆಯಾಗುವಂತಾಗಲು ಪದವಿ ಪೂರ್ವ ಉಪನ್ಯಾಸಕರಿಗೆ ಸಮಾಲೋಚನೆ ನಡೆಯಲಿದೆ ಎಂದು ಸಂಸ್ಥೆಯ ಎಂಡಿ ಡಾ.ಬಾಬುರಾವ್ ಶೇಗುಣಸಿ ತಿಳಿಸಿದ್ದಾರೆ.
ನಗರಸಭೆ; ಇಂದು ಮುಖಾಮುಖಿ
ಸಿಂಧನೂರು: ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘವು ನಗರಸಭೆ ಆಡಳಿತ ಮಂಡಳಿಯೊಂದಿಗೆ ಸಾರ್ವಜನಿಕರ ಮುಖಾಮುಖಿ ಕಾರ್ಯಕ್ರಮವನ್ನು ನಾಳೆ ಫೆ.2 ರಂದು ಬೆಳಗ್ಗೆ 10 ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರು ತಮ್ಮ ವಾರ್ಡ್ಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಕುರಿತು ಹೇಳಲು ಅವಕಾಶ ಕಲ್ಪಿಸುವ ಜೊತೆಯಲ್ಲಿ ಸಾರ್ವಜನಿಕರು ತಿಳಿಸುವ ಮತ್ತು ಪರಿಹಾರ ಕುರಿತಾಗಿ ಚರ್ಚಿಸಲಾಗುವುದು ಸಾರ್ವಜನಿಕರು ಭಾಗವಹಿಸುವಂತೆ ಕಾರ್ಯನಿರತ ಪತ್ರಕರ್ತರ ಸಂಘ ವಿನಂತಿ ಮಾಡಿದೆ.
ಕ್ರೀಡಾ ಪ್ರಶಸ್ತಿಗೆ ಕರೆ
ರಾಯಚೂರು: 2011-12ನೇ ಸಾಲಿನಲ್ಲಿ ಜಿಲ್ಲೆಯಿಂದ ಅಂತಾರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಸಾಧನೆ ತೋರಿದ ಜಿಲ್ಲೆಯ ಆಯ್ದ ಕ್ರೀಡಾಪಟುಗಳಿಗೆ ಕ್ರೀಡಾ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಇತರೆ ಮಾಹಿತಿಗಾಗಿ ಜಿಲ್ಲಾ ಕ್ರೀಡಾಧಿಕಾರಿಗಳು, ರಾಯಚುರು ಇವರನ್ನು ಸಂಪರ್ಕಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಲು ಫೆ.3 ಕಡೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಅಧಿಕಾರ ಸ್ವೀಕಾರ
ರಾಯಚೂರು: ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣೆ ವಿಭಾಗದ ತಹಸೀಲ್ದಾರ್ ಆಗಿ ಲಕ್ಷ್ಮಯ್ಯ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಅದೇ ರೀತಿ ರಾಯಚೂರಿನ ತಹಸೀಲ್ ಕಚೇರಿಯ ಮೋಹನ್ ದೇವದುರ್ಗದ(ಪ್ರಭಾರಿ) ತಹಸೀಲ್ದಾರರಾಗಿ ಅಧಿಕಾರ ಸ್ವೀಕರಿಸಿದ್ದಾರೆಂದು ಅಪರ ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

