ರಾಯಚೂರು

ನಾಳೆ ಮರಿಬಸವಲಿಂಗ ತಾತನ ಜಾತ್ರೆ

Published On :

ಸಿಂಧನೂರು: ತಾಲೂಕಿನ ಉಟಕನೂರಲ್ಲಿ ಬಸವಲಿಂಗ ದೇಶಿ ಕೇಂದ್ರ ಶಿವಯೋಗಿಗಳ ಪುಣ್ಯತಿಥಿ ಮತ್ತು ಮರಿ ಬಸವಲಿಂಗ ತಾತನವರ 22ನೇ ಜಾತ್ರಾ ಮಹೋತ್ಸವ ಮತ್ತು ಗುರುಗುಂಟಾ ಅಮರೇಶ್ವರ ಪುರಾಣ ಮಹಾಮಂಗಲ ಕಾರ್ಯಕ್ರಮ ಫೆ.4ರಂದು ಜರುಗಲಿದೆ.
ತೆಕ್ಕಲಕೋಟೆಯ ಕಂಬಾಳಿಮಠದ ವೀರಭದ್ರ ಶಿವಾಚಾರ್ಯರು ಮತ್ತು ಉಟಕನೂರು ಸುಕ್ಷೇತ್ರದ ಮರಿಬಸವರಾಜ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಬಿಚ್ಚಾಲಿ ವೀರಭದ್ರ ಶಿವಾಚಾರ್ಯರು, ನಿಲೋಗಲ್ ಪಂಚಾಕ್ಷರಿ ಶಿವಾಚಾರ್ಯರು, ರಾಯಚೂರು ಶಾಂತಮಲ್ಲ ಶಿವಾಚಾರ್ಯರು, ಹಳೇಕೋಟೆ ಮಲ್ಲಿಕಾರ್ಜುನ ಸ್ವಾಮೀಜಿ, ಅಂಕಲಿಮಠದ ವೀರಭದ್ರ ಸ್ವಾಮೀಜಿ, ಕರೇಗುಡ್ಡದ ಮಹಾಂತಲಿಂಗ ಶಿವಾಚಾರ್ಯರು, ಎಮ್ಮಿಗನೂರು ನಾಮದೇವಾಚಾರ್ಯರು, ಅತ್ತನೂರು ರಾಯಚೋಟಿ ಶಿವಾಚಾರ್ಯರು, ಗಬ್ಬೂರು ಬೂದಿಬಸವ ಶಿವಾಚಾರ್ಯರು, ಸಿಂಧನೂರು ಶಿದ್ದಲಿಂಗ ಶಿವಾಚಾರ್ಯರು, ರಂಭಾಪುರಿ ಶಾಖಾಮಠದ ಸೋಮನಾಥ ಶಿವಾಚಾರ್ಯರು, ಗುರುಗುಂಟಾ ಸದಾನಂದ ಶಿವಾಚಾರ್ಯರು, ಸಂತೆಕೆಲ್ಲೂರು ಮಹಾಂತ ಶಿವಾಚಾರ್ಯರು, ದೇವರಭೂಪುರು ಗಜದಂಡ ಶಿವಾಚಾರ್ಯರು, ಮಸ್ಕಿ ರುದ್ರಮುನಿ ಶಿವಾಚಾರ್ಯರು, ನವಲಕಲ್ ಸೋಮನಾಥ ಶಿವಾಚಾರ್ಯರು ಭಾಗವಹಿಸಲಿದ್ದಾರೆ ಎಂದು ಅಡವಿಸಿದ್ದೇಶ್ವರ ಸುಕ್ಷೇತ್ರದ ಭಕ್ತ ಮಂಡಳಿ ತಿಳಿಸಿದೆ.
ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಬೆ.6ಕ್ಕೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಸಂಜೆ 5ಕ್ಕೆ ಹೂವಿನ ರಥೋತ್ಸವ ತದನಂತರ ಪುರಾಣ ಮಹಾಮಂಗಲ ಜರುಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.