ರಾಯಚೂರು

ಇಂದು ಕಾರ್ಯಾಗಾರ

Published On :

ರಾಯಚೂರು: ಮಾನವಿಯಲ್ಲಿ ಫೆ.7ರಂದು ಕರಿಯರ್ ಗೈಡೆನ್ಸ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾನವಿ ಪಟ್ಟಣದ ಎಪಿಎಂಸಿ ಕಲ್ಯಾಣ ಮಂಟಪದಲ್ಲಿ ಮಾನವಿ ತಾಲೂಕಿನ ವಿದ್ಯಾವಂತ ಯುವಕ/ಯುವತಿಯರಿಗೆ ಉಜ್ವಲ ಭವಿಷ್ಯದ ಮಾರ್ಗದರ್ಶನಕ್ಕಾಗಿ ಕರಿಯರ್ ಗೈಡೆನ್ಸ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.  
ಅರ್ಜಿ ಆಹ್ವಾನ
ರಾಯಚೂರು: ಸಮಾಜ ಕಲ್ಯಾಣ ಇಲಾಖೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. 2013-14ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿ ನಮೂನೆಗಳನ್ನು ಫೆ.7ರಿಂದ ಜಿಲ್ಲೆಯ ಎಲ್ಲ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಫೆ.25ರೊಳಗೆ ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವೈ.ವಿ. ಕಾಳೆ ತಿಳಿಸಿದ್ದಾರೆ.
ಉಚ್ಚಾಟನೆ
ರಾಯಚೂರು: ಮಾದಿಗ ದಂಡೋರಾ ಮಾದಿಗ ರಿಸರ್ವೇಶನ್ ಹೋರಾಟ ಸಮಿತಿಯ ಜಿಲ್ಲಾ ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀನಿವಾಸ ಸಿಂಗನೋಡಿ ಅವರನ್ನು ಸಂಘಟನೆಯಿಂದ ಉಚ್ಚಾಟಿಸಲಾಗಿದೆ ಎಂದು ಸಂಘಟನೆ ಜಿಲ್ಲಾಧ್ಯಕ್ಷ ನರಸಪ್ಪ ದಂಡೋರಾ ತಿಳಿಸಿದ್ದಾರೆ. ಶ್ರೀನಿವಾಸ್ ಸಿಂಗನೋಡಿ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸಿದ ಆರೋಪ ಮತ್ತು ಮಾದಿಗ ಸಮಾಜಕ್ಕೆ ಅಗೌರವ ತರುವ ರೀತಿಯಲ್ಲಿ ವರ್ತಿಸಿದ ಹಿನ್ನೆಲೆಯಲ್ಲಿ ಅವರನ್ನು ಸಂಘಟನೆಯಿಂದ ಉಚ್ಛಾಟಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.